ಗುರುವಾರ , ಆಗಸ್ಟ್ 11, 2022
21 °C

ಹಿಂದೂ ಧರ್ಮಕ್ಕೆ ಮರಳಿದ 23 ಮಂದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಳಿಯಾಳ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ ತಾಲ್ಲೂಕಿನ 23 ಮಂದಿ ಈಚೆಗೆ ಹಿಂದೂ ಧರ್ಮವನ್ನು ಪುನಃ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಅವರನ್ನು ಸ್ವಾಗತಿಸಲಾಯಿತು.

ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ, ‘ನಾವು ಯಾವ ಧರ್ಮದಲ್ಲಿ ಜನ್ಮ ತಾಳಿದ್ದೇವೆಯೋ ಆ ಧರ್ಮದ ಸೇವೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ’ ಎಂದರು.

ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ‘ಘರ್ ವಾಪಸಿ ಧಾರ್ಮಿಕ ಕಾರ್ಯಕ್ರಮವು ಯಾವುದೇ ರಾಜಕೀಯ ಗಿಮಿಕ್ ಅಲ್ಲ. ಯಾವ ಧರ್ಮದಲ್ಲಿ ಹುಟ್ಟಿದ್ದೇವೆಯೋ ಆ ಧರ್ಮವನ್ನು ಪರಿಪಾಲನೆ ಮಾಡಬೇಕು. ಹಿಂದೂ ಧರ್ಮವನ್ನು ಉಳಿಸಿ ಬೆಳೆಸಿಕೊಂಡು ಸಾಗುವುದರ ಜೊತೆಗೆ ಸ್ವ ಧರ್ಮ ನಿಷ್ಠೆ, ಪರಧರ್ಮ ಸಹಿಷ್ಣುತೆ ಪ್ರತಿಯೊಬ್ಬರಲ್ಲೂ ಇರಬೇಕು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು