ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡವೆಯ ನಾಲ್ಕು ಕೊಂಬು, ಅಕ್ರಮ ಕಟ್ಟಿಗೆ ವಶ: ಇಬ್ಬರ ಬಂಧನ

Last Updated 17 ಆಗಸ್ಟ್ 2022, 13:55 IST
ಅಕ್ಷರ ಗಾತ್ರ

ಕುಮಟಾ: ತಾಲ್ಲೂಕಿನ ಕತಗಾಲ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಬುಧವಾರ, ವಾಹನದಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಕಡವೆಯ ನಾಲ್ಕು ಕೊಂಬುಗಳು ಹಾಗೂ ಕಟ್ಟಿಗೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಶಿರಸಿಯ ಕಸ್ತೂರಬಾ ನಗರ ನಿವಾಸಿ ಮಹಮ್ಮದ್ ಅಸ್ಲಾಂ ಬಾಬಾಜಾನ್ ಕರ್ಕಿಮಕ್ಕಿ (42), ಶಿರಸಿಯ ಅಂಜು ಫರ್ನಿಚರ್ ಮಾಲೀಕ ಅಂಥೋನ್ ಬಿ.ನರೋನಾ (68) ಬಂಧಿತರು.

‘ಕಡವೆ ಕೊಂಬುಗಳ ಜೊತೆಗೆ ಕಾಡು ಜಾತಿಯ ವಿವಿಧ ಮರಗಳ 54 ಕಟ್ಟಿಗೆ ತುಂಡುಗಳು, ಸರಕು ಸಾಗಣೆಯ ಆಟೊ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವನ್ಯಜೀವಿ ಹಾಗೂ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹೊನ್ನಾವರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತಕುಮಾರ ಹಾಗೂ ಕುಮಟಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಟ್ ನೇತೃತ್ವದಲ್ಲಿ ಕತಗಾಲ ವಲಯ ಅರಣ್ಯ ಸಿಬ್ಬಂದಿ ದಾಳಿ ಮಾಡಿದರು’ ಎಂದು ಕತಗಾಲ ವಲಯ ಅರಣ್ಯಾಧಿಕಾರಿ ದೀಪಕ್ ನಾಯ್ಕ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಬಿ.ಎನ್.ಬಂಕಾಪುರ, ಹರಿಶ್ಚಂದ್ರ ಪಟಗಾರ, ಅರಣ್ಯ ರಕ್ಷಕರಾದ ಮಹೇಶ ಹವಳೆಮ್ಮನವರ್, ಗಣೇಶ ನಾಯಕ, ಸದಾಶಿವ ಪುರಾಣಿಕ್, ವಾಹನ ಚಾಲಕ ವಸಂತ ನಾಯ್ಕ, ಸಿಬ್ಬಂದಿ ನಾಗೇಶ ಪಟಗಾರ, ಶಂಕರ ಗೌಡ, ಕಿರಣ ನಾಯ್ಕ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT