ಭಾನುವಾರ, ಮೇ 16, 2021
22 °C

ಕಾರವಾರದಲ್ಲಿ ಸ್ಕಾರ್ಪಿಯೊ ಪಲ್ಟಿ: ಬೆಂಗಳೂರಿನ ಇಬ್ಬರು ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ತಾಲ್ಲೂಕಿನ ಭೈರಾ ಗ್ರಾಮದ ರಾಜ್ಯ ಹೆದ್ದಾರಿ 34ರಲ್ಲಿ ಶನಿವಾರ ಸ್ಕಾರ್ಪಿಯೊ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ.

ಮೃತರನ್ನು ಚಾಲಕ, ಬೆಂಗಳೂರಿನ ವಿದ್ಯಾರಣ್ಯಪುರದ ಸೈಯದ್ ಮುನೀರ್ ಸೈಯದ್ (35) ಹಾಗೂ ತಾಯವ್ವ (37) ಎಂದು ಗುರುತಿಸಲಾಗಿದೆ. ಗಾಯಗೊಂಡವರೆಲ್ಲರೂ ಬೆಂಗಳೂರಿನ ನಿವಾಸಿಗಳಾಗಿದ್ದಾರೆ.

ಅವರು ತಾಲ್ಲೂಕಿನ ಹಳಗಾದ ಪಾರ್ಶ್ವವಾಯು ಚಿಕಿತ್ಸಾ ಕೇಂದ್ರದಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ಕೊಡಿಸಿ ಪುನಃ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಅತಿಯಾದ ವೇಗದಲ್ಲಿದ್ದ ವಾಹನವನ್ನು ತಿರುವಿನಲ್ಲಿ ಚಾಲಕನಿಗೆ ನಿಯಂತ್ರಿಸಲಾಗದೇ ಪಲ್ಟಿಯಾಯಿತು. ಅಪಘಾತದ ರಭಸಕ್ಕೆ ಮೃತರಿಬ್ಬರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಅತಿಯಾದ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು