ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂದೆಯ ಶವಸಂಸ್ಕಾರ: ಹೂವು ತರಲು ಹೊರಟಿದ್ದ ಮಗ ಸಾವು

Last Updated 15 ಮಾರ್ಚ್ 2021, 20:36 IST
ಅಕ್ಷರ ಗಾತ್ರ

ಶಿರಸಿ: ಇಲ್ಲಿನ ಎಸ್‌ಬಿಐ ಸರ್ಕಲ್ ಬಳಿ ಸೋಮವಾರ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಗಣೇಶ ನಗರದ ರವಿಚಂದ್ರ ವಡ್ಡರ್ (34), ಸುನೀಲ ಇಂದೂರ (26) ಮೃತರು. ರವಿಚಂದ್ರ ತಂದೆ ಹನುಮಂತಪ್ಪ ಸೋಮವಾರ ನಸುಕಿನ ಜಾವ ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಹೂ ತರಲು ಇಬ್ಬರು ಮಾರುಕಟ್ಟೆಗೆ ತೆರಳುತ್ತಿದ್ದರು.

ಈ ವೇಳೆ ಇನ್ನೊಂದು ರಸ್ತೆಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಬಸ್ ಅಡಿಗೆ ಸಿಲುಕಿದ ಬೈಕ್ ನುಜ್ಜುಗುಜ್ಜಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ರವಿ ನಾಯ್ಕ ಭೇಟಿ ನೀಡಿದ್ದು, ಪರಿಶೀಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT