ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆಯಲ್ಲಿ ಮಕ್ಕಳ ತುರುಸಿನ ಸ್ಪರ್ಧೆ

ಶೈಕ್ಷಣಿಕ ಜಿಲ್ಲಾ ಮಟ್ಟದ ಕ್ರೀಡಾಕೂಟ
Last Updated 21 ಸೆಪ್ಟೆಂಬರ್ 2019, 12:11 IST
ಅಕ್ಷರ ಗಾತ್ರ

ಶಿರಸಿ: ಕ್ರೀಡೆಯು ಮಕ್ಕಳ ನಡುವೆ ಸಮಾನತೆ ಸಾಧಿಸಲು ಪೂರಕವಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಹೇಳಿದರು.

14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಶನಿವಾರ ಇಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಭೆ ಪ್ರದರ್ಶಿಸಲು ಕ್ರೀಡಾಕೂಟಗಳು ವೇದಿಕೆಯಾಗಿವೆ. ಕ್ರೀಡೆಯ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಯಶಸ್ಸು ಪಡೆಯಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಸದಸ್ಯ ಬಸವರಾಜ ದೊಡ್ಮನಿ ಮಾತನಾಡಿ, ‘ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಮುಖ್ಯ. ಚಿಕ್ಕಪುಟ್ಟ ವೈಫಲ್ಯಕ್ಕೆ ಎದೆಗುಂದದೇ ಅವುಗಳನ್ನು ಸರಿಪಡಿಸಿಕೊಂಡು ಭವಿಷ್ಯದಲ್ಲಿ ಗೆಲುವಿನ ಮೆಟ್ಟಿಲು ಹತ್ತಬೇಕು’ ಎಂದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ ಮುರೇಗಾರ, ತಾಲ್ಲೂಕು ಪಂಚಾಯ್ತಿ ಸದಸ್ಯ ರವಿ ಹಳದೋಟ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಶಾಂತ ಹೆಗಡೆ, ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಪಟಗಾರ, ತಾಲ್ಲೂಕು ಕಾರ್ಯದರ್ಶಿ ಸುರೇಶ ಪಟಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಶೋಕ ಭಜಂತ್ರಿ, ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ, ಪ್ರಮುಖರಾದ ವಸಂತ ಭಂಡಾರಿ, ಎಂ.ಕೆ.ಮೊಗೇರ ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸ್ವಾಗತಿಸಿದರು. ಡಿ.ಪಿ.ಹೆಗಡೆ ನಿರೂಪಿಸಿದರು.
ಕ್ರೀಡಾಕೂಟದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಆರು ತಾಲ್ಲೂಕುಗಳ ಸುಮಾರು 700 ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ವೈಯಕ್ತಿಕ ವಿಭಾಗದಲ್ಲಿ 100 ಮೀಟರ್ ಓಟ, 200 ಮೀಟರ್ ಓಟ, 400 ಮೀಟರ್ ಓಟ, ಗುಂಡು, ಚಕ್ರ, ಉದ್ದಜಿಗಿತ, ಎತ್ತರ ಜಿಗಿತ ಹಾಗೂ ಗುಂಪು ಆಟಗಳಾದ ಕೊಕ್ಕೊ, ಕಬಡ್ಡಿ, ವಾಲಿಬಾಲ್, ಥ್ರೊ ಬಾಲ್, ಹರ್ಡಲ್ಸ್ ಸ್ಪರ್ಧೆಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT