ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಾಲೆ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಯತ್ನ

Last Updated 24 ಸೆಪ್ಟೆಂಬರ್ 2021, 15:34 IST
ಅಕ್ಷರ ಗಾತ್ರ

ಶಿರಸಿ: ಖಾಸಗಿ ಶಾಲೆಗಳ ಶಿಕ್ಷಕರು ಎದುರಿಸುತ್ತಿದ್ದ ಹಲವು ಸಮಸ್ಯೆಗಳಿಗೆ ಅಸ್ತಿತ್ವಕ್ಕೆ ಬಂದ ಎಂಟು ತಿಂಗಳಲ್ಲಿ ಪರಿಹಾರ ಒದಗಿಸುವ ಪ್ರಯತ್ನವನ್ನು ಸಂಘಟನೆ ಮಾಡಿದೆ ಎಂದು ಖಾಸಗಿ ಶಾಲಾ ಶಿಕ್ಷಕರ ಸಂಘದ ಶಿರಸಿ ಶೈಕ್ಷಣಿಕ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಭಟ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಸಂಕಷ್ಟದ ಸಮಯದಲ್ಲಿ ಶಿಕ್ಷಕರಿಗೆ ಆಹಾರದ ಕಿಟ್ ಒದಗಿಸುವ ಕೆಲಸವನ್ನು ದಾನಿಗಳ ನೆರವಿನೊಂದಿಗೆ ಸಂಘಟನೆ ನಡೆಸಿದೆ’ ಎಂದರು.

‘ಸಂಘದ ಮನವಿಗೆ ಸ್ಪಂದಿಸಿ ಖಾಸಗಿ ಶಾಲೆ ಶಿಕ್ಷಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲು ಕೆಡಿಸಿಸಿ ಬ್ಯಾಂಕ್, ಶಿರಸಿ ಅರ್ಬನ್ ಬ್ಯಾಂಕ್ ನಿರ್ಧರಿಸಿವೆ. ಸಂಜೀವಿನಿ ಯೋಜನೆಯನ್ನು ಖಾಸಗಿ ಶಾಲೆ ಶಿಕ್ಷಕರಿಗೂ ವಿಸ್ತರಿಸಲು ಬಲವಾಗಿ ಒತ್ತಾಯಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಶಿಕ್ಷಕರ ದಿನಾಚರಣೆ ನಿಮಿತ್ತ ಮೊದಲ ಬಾರಿಗೆ ಸಂಘಟನೆ ವತಿಯಿಂದ ಸೆ.25 ರಂದು ಗುರುವಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಖಾಸಗಿ ಶಾಲೆ ಶಿಕ್ಷಕರಿಗೆ ವಿವಿಧ ಸ್ಪರ್ಧೆ ಆಯೋಜಿಸಲಾಗುತ್ತಿದ್ದು, ನಿವೃತ್ತ ಖಾಸಗಿ ಶಾಲೆ ಶಿಕ್ಷಕರನ್ನು ಸನ್ಮಾನಿಸಲಾಗುತ್ತಿದೆ’ ಎಂದು ತಿಳಿಸಿದರು.

ಸಂಘದ ಗೌರವಾದ್ಯಕ್ಷ ಶಾಂತಾರಾಮ ನಾಯ್ಕ, ಅಧ್ಯಕ್ಷ ಶಶಾಂಕ ಹೆಗಡೆ, ಸಂತೋಷ ಕೆ.ಐ., ವಿನೋದ ಡಯಾಸ್, ಕಮಲಾಕರ ಪಟಗಾರ, ಸುಜಾತಾ ಆಚಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT