ಮಂಗಳವಾರ, ಆಗಸ್ಟ್ 16, 2022
29 °C

UPSC ಫಲಿತಾಂಶ: ಹೊನ್ನಾವರದ ದೀಪಕ್‌ಗೆ 311ನೇ ರ‍್ಯಾಂಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಹೊನ್ನಾವರ ತಾಲ್ಲೂಕಿನ ಮಂಕಿ ಗ್ರಾಮದ ದೀಪಕ್ ಆರ್.ಶೇಟ್ 311ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಆರನೇ ತರಗತಿಯಿಂದ 10ನೇ ತರಗತಿಯವರೆಗೆ ಶಿರಸಿಯ ಮೊರಾರ್ಜಿ ಶಾಲೆಯಲ್ಲಿ ಅಧ್ಯಯನ ಮಾಡಿದ್ದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅವರು ಶಾಲೆಗೆ ‘ಟಾಪರ್’ ಆಗಿದ್ದರು. ಆ ದಿನಗಳಲ್ಲಿ ಶಾಲಾ ಮಂತ್ರಿ ಮಂಡಲದಲ್ಲಿ ಆಹಾರ ಖಾತೆಯ ಸಚಿವರಾಗಿದ್ದರು. ಅವರಿಗೆ ಮಾಜಿ ವೇಗದ ಬೌಲರ್ ಅಜಿತ್ ಅಗರ್ಕರ್ ನೆಚ್ಚಿನ ಕ್ರಿಕೆಟರ್ ಆಗಿದ್ದರು ಎಂದು ಸಹಪಾಠಿಗಳು ನೆನಪಿಸಿಕೊಂಡಿದ್ದಾರೆ.

ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಪಿ.ಯು. ಅಧ್ಯಯನ ಮಾಡಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡಿದರು. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಅವರು, ಯು.ಪಿ.ಎಸ್.ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡು ಬೆಂಗಳೂರಿನಲ್ಲೇ ತರಬೇತಿಗೆ ಸೇರಿಕೊಂಡರು.

ಅವರ ಕುಟುಂಬವು ಮಂಕಿ ಗ್ರಾಮದಲ್ಲಿದ್ದು, ಚಿನ್ನ ಬೆಳ್ಳಿಯ ವ್ಯಾಪಾರ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು