ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನಲ್ಲಿ ಅಂಬೇಡ್ಕರ್ ರಾಜಗ್ರಹ ನಿವಾಸ ಧ್ವಂಸ: ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯ

Last Updated 21 ಜುಲೈ 2020, 14:11 IST
ಅಕ್ಷರ ಗಾತ್ರ

ಶಿರಸಿ: ಮುಂಬೈ ದಾದರ್‌ನಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ರಾಜಗ್ರಹ ನಿವಾಸ ಮತ್ತು ಗ್ರಂಥಾಲಯಗಳನ್ನು ಧ್ವಂಸ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಪರಿಶಿಷ್ಟ ಜಾತಿ ಘಟಕವು ಮಂಗಳವಾರ ಇಲ್ಲಿ ಉಪವಿಭಾಗಾಧಿಕಾರಿ ಡಾ. ಈಶ್ವರ ಉಳ್ಳಾಗಡ್ಡಿ ಅವರಿಗೆ ಮನವಿ ಸಲ್ಲಿಸಿತು.

ಮಹಾರಾಷ್ಟ್ರದ ಆಡಳಿತಾರೂಢ ಸರ್ಕಾರವು ದುಷ್ಕರ್ಮಿಗಳ ಮೇಲೆ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ, ತಪ್ಪಿತಸ್ಥರ ಮೇಲೆ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಬೇಕು. ಅಂಬೇಡ್ಕರ್ ಸ್ಮಾರಕಗಳಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ರಾಷ್ಟ್ರಪತಿಗೆ ನೀಡಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ. ಸಂಘಟನೆ ಪ್ರಮುಖರಾದ ಅರವಿಂದ ನೇತ್ರೇಕರ, ಅನೂಪ್ ಪಾಲೇಕರ, ಕೃಷ್ಣ ನೇತ್ರೇಕರ, ವಿನಾಯಕ ನಾಯ್ಕ, ಹರೀಶ ಪಾಲೇಕರ, ಮಹೇಂದ್ರ ಮುರ್ಡೇಶ್ವರ, ಕುಮಾರ ಪಾವಸ್ಕರ, ನಾಗರತ್ನಾ ಜೋಗಳೇಕರ, ವಸಂತ ನೇತ್ರೇಕರ, ನಾಗೇಶ ಮರಾಠೆ, ರಾಜು ಜೋಗಳೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT