ಬುಧವಾರ, ಆಗಸ್ಟ್ 12, 2020
27 °C

ಶಿರಸಿ: ಪದವಿ ಪರೀಕ್ಷೆ ರದ್ದತಿಗೆ ಕೆಲ ಪದವಿ ವಿದ್ಯಾರ್ಥಿಗಳ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಪಠ್ಯಕ್ರಮ ಪೂರ್ಣಗೊಳಿಸದೇ, ಆನ್‌ಲೈನ್ ಕ್ಲಾಸ್‌ ಅನ್ನು ಕೂಡ ವ್ಯವಸ್ಥಿತವಾಗಿ ನಡೆಸದೇ ಕೋವಿಡ್ 19 ಸಾಂಕ್ರಾಮಿಕ ಕಾಯಿಲೆ ಭಯದ ನಡುವೆ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಕೆಲ ವಿದ್ಯಾರ್ಥಿಗಳು ದೂರಿದ್ದಾರೆ.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಪ್ರಣವ್ ಭಾರದ್ವಾಜ್, ‘ವಿವಿಧ ವಿಶ್ವವಿದ್ಯಾಲಯಗಳು ಬೇರೆ ಬೇರೆ ಸೆಮಿಸ್ಟರ್ ಅವಧಿ ಹೊಂದಿವೆ. ಪದವಿ ತರಗತಿಗಳು ನೂರಾರು ವಿಷಯ ಸಂಯೋಜನೆಯನ್ನು ಒಳಗೊಂಡಿವೆ. ಕೆಲವು ವಿಶ್ವವಿದ್ಯಾಲಯಗಳು ಪಠ್ಯಕ್ರಮ ಪೂರ್ಣಗೊಳಿಸಿದರೆ, ಇನ್ನು ಕೆಲವು ಪೂರ್ಣಗೊಳಿಸಿಲ್ಲ. ದಾಖಲೆಯಲ್ಲಿ ಮಾತ್ರ ಅವು ಪೂರ್ಣಗೊಂಡಿವೆ. ಇದು ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಾಗಿದೆ. ಹೀಗಾಗಿ, ಹಿಂದಿನ ಸೆಮಿಸ್ಟರ್‌ಗಳ ಫಲಿತಾಂಶದ ಆಧಾರದ ಮೇಲೆ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಅಂಕ ನೀಡಬೇಕು. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಮೊದಲಿನಂತೆಯೇ ಹಿಂದುಳಿದ ವಿಷಯಗಳ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಹೆಚ್ಚುವರಿ ಅಂಕ ಪಡೆಯಬೇಕೆಂಬ ಆಸೆಯಿದ್ದವರಿಗೆ, ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದಂತೆ, ಪರೀಕ್ಷೆಯ ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು. ವಿದ್ಯಾರ್ಥಿಗಳಾದ ಸಂಧ್ಯಾ ಹೆಗಡೆ, ಆದರ್ಶ ಹೆಗಡೆ, ಯತೀಶ ಹೆಗಡೆ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು