ಶನಿವಾರ, ಮಾರ್ಚ್ 6, 2021
20 °C
ಕಾರ್ಮಿಕರ ಒತ್ತಾಯ

ಕಾರ್ಮಿಕರ ಧನಸಹಾಯ ಜಮಾ ಮಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಲಾಕ್‌ಡೌನ್‌ನಿಂದ ತೊಂದರೆಯಲ್ಲಿರುವ ಕಾರ್ಮಿಕರಿಗೆ ಸರ್ಕಾರ ನೀಡಲು ನಿರ್ಧರಿಸಿರುವ ಧನಸಹಾಯವನ್ನು ಶೀಘ್ರದಲ್ಲಿ ಅವರ ಖಾತೆಗೆ ಜಮಾ ಮಾಡಬೇಕು ಎಂದು ವಿವಿಧ ಕಾರ್ಮಿಕ ಸಂಘಟನೆಗಳು ಒತ್ತಾಯಿಸಿವೆ.

ಬಣ್ಣ ಗುತ್ತಿಗೆದಾರರ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಪ್ರಮುಖರು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಶುಕ್ರವಾರ ಇಲ್ಲಿ ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಅವರಿಗೆ ನೀಡಲಾಯಿತು.

ಜಿಲ್ಲೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆ ಅಡಿಯಲ್ಲಿ 55ಸಾವಿರಕ್ಕೂ ಹೆಚ್ಚು ಕಾರ್ಮಿಕರು ಇದ್ದಾರೆ. 46 ದಿನಗಳ ಲಾಕ್‌ಡೌನ್‌ನಿಂದ ಕಾರ್ಮಿಕರಿಗೆ ದುಡಿಯಲು ಅವಕಾಶವಾಗಿಲ್ಲ. ಸರ್ಕಾರ ಏಪ್ರಿಲ್ 4ರಂದು ಈ ಕಾರ್ಮಿಕರಿಗೆ ಧನಸಹಾಯ ನೀಡುವುದಾಗಿ ಘೋಷಿಸಿತ್ತು. ಈ ಸಂಬಂಧ ಕಾರ್ಮಿಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರು. ಆದರೆ, ಈವರೆಗೂ ಕಾರ್ಮಿಕರಿಗೆ ಹಣ ಸಂದಾಯವಾಗಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಕಮಲಾಕರ ಆಚಾರಿ, ಬಣ್ಣ ಗುತ್ತಿಗೆದಾರರ ಮತ್ತು ಕಾರ್ಮಿಕರ ಸಂಘದ ಉಪಾಧ್ಯಕ್ಷ ಮಂಜುನಾಥ ನಾಯ್ಕ, ಅಶೋಕ ಪಡ್ತಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು