ಶುಕ್ರವಾರ, ಜುಲೈ 30, 2021
28 °C

ಬ್ಯಾಂಕ್‌ಗಳಲ್ಲಿ ಕನ್ನಡ ಸಿಬ್ಬಂದಿ ಇರಲಿ: ಕನ್ನಡ ಪರ ಸಂಘಟನೆಗಳ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಸ್ಥಳೀಯವಾಗಿ ಕಾರ್ಯನಿರ್ವಹಿಸುವ ಎಲ್ಲ ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರರಾಜ್ಯದ ಸಿಬ್ಬಂದಿಯನ್ನು ತಕ್ಷಣ ವರ್ಗಾವಣೆ ಮಾಡಿ, ಆ ಜಾಗಕ್ಕೆ ಕನ್ನಡ ಸಿಬ್ಬಂದಿಯನ್ನು ವರ್ಗಾವಣೆ ಮಾಡಬೇಕು ಅಥವಾ ನೇಮಿಸಬೇಕು ಎಂದು ‘ನಾವು ಕನ್ನಡಿಗರು‘ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಇಲ್ಲಿ ಮನವಿ ನೀಡಿದರು.

ಕರ್ನಾಟಕದ ಉದ್ಯೋಗ ಕನ್ನಡಿರ ಹಕ್ಕು ಚಳವಳಿಯ ಮುಂದುವರಿದ ಭಾಗವಾಗಿ, ಈ ಕಾರ್ಯಕ್ರಮ ನಡೆಸಿದ ಸಂಘಟನೆ ಕಾರ್ಯಕರ್ತರು, ಎಲ್ಲ ಬ್ಯಾಂಕ್‌ಗಳಿಗೆ ಭೇಟಿ ನೀಡಿದರು. ಸಂಘಟನೆ ಸ್ಥಳೀಯ ಪ್ರಮುಖರಾದ ಸಂದೇಶ ನಾಯ್ಕ, ಪ್ರಸನ್ನ ನಾಯ್ಕ, ಗಣೇಶ ಕಂಬಾರ್, ಮದನ್ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು