ಶುಕ್ರವಾರ, ಜನವರಿ 22, 2021
28 °C

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ವಿಡಿಯೊ ಕಾರಣ: ಡಿ.ಕೆ. ಶಿವಕುಮಾರ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DK Shivakumar

ಕಾರವಾರ: 'ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ವಿಡಿಯೊವೊಂದು ಕಾರಣ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಸಂತೋಷ್ ಯಾರದ್ದೋ ವೈಯಕ್ತಿಕ ವಿಡಿಯೊವನ್ನು ವಿಧಾನಪರಿಷತ್ ಸದಸ್ಯರಿಗೆ ಹಾಗೂ ಸಚಿವರಿಗೆ ಕೊಟ್ಟ ಮಾಹಿತಿ ಎರಡು ಮೂರು ತಿಂಗಳ ಹಿಂದೆ ಬಂದಿತ್ತು. ಅದನ್ನು ಮುಂದೆ ಇಟ್ಟುಕೊಂಡು ವಿಧಾನಪರಿಷತ್ ಸದಸ್ಯರು, ಸಚಿವರು ಇಬ್ಬರೂ ಸೇರಿ ಮುಖ್ಯಮಂತ್ರಿ ಹಾಗೂ ಸಂತೋಷ್‌ಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬಗ್ಗೆ ಕೇಳಿದ್ದೇನೆ. ಅದರ ಸಂತ್ಯಾಂಶವೇನೆಂದು ಗೊತ್ತಿಲ್ಲ' ಎಂದು ಹೇಳಿದರು.

ಇದನ್ನೂ ಓದಿ: 

'ಇದರಲ್ಲಿ ಗುಪ್ತವಾದ ಸಂಗತಿಯೇನೋ ಅಡಗಿದೆ. ಸರ್ಕಾರವೇ ತನಿಖೆ ಮಾಡುವುದರಲ್ಲಿ ಅರ್ಥವಿಲ್ಲ' ಎಂದು ಅಭಿಪ್ರಾಯಪಟ್ಟರು.

ವಿಧಾನಪರಿಷತ್ ಸದಸ್ಯ ಮತ್ತು ಸಚಿವರು ಯಾರು ಎಂದು ಕೇಳಿದಾಗ ಶಿವಕುಮಾರ್ ಸ್ಪಷ್ಟಪಡಿಸಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು