ಕಾರವಾರ: ವಿಧಾನಪರಿಷತ್ ಚುನಾವಣೆಯಲ್ಲಿ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿಯಾಗಿ ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್ ಮಂಗಳವಾರ ನಾಮಪತ್ರ ಸಲ್ಲಿಸಿದರು.

ನಗರದ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಅವರು ಪಾದಯಾತ್ರೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದರು. ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ನಾಯ್ಕ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ಉಪಾಧ್ಯಕ್ಷ ಗೋವಿಂದ ನಾಯ್ಕ ಹಾಗೂ ಕಾರ್ಯಕರ್ತರು ಜೊತೆಗಿದ್ದರು.

ಕಳೆದ ಬಾರಿಯೂ ಸ್ಪರ್ಧಿಸಿದ್ದ ಉಳ್ವೇಕರ್, ಕಾಂಗ್ರೆಸ್ನ ಶ್ರೀಕಾಂತ ಘೊಟ್ನೇಕರ್ ವಿರುದ್ಧ ಪರಾಭವಗೊಂಡಿದ್ದರು. ಅವರೀಗ ಎರಡನೇ ಬಾರಿಗೆ ಸ್ಪರ್ಧೆಯಲ್ಲಿದ್ದಾರೆ.

ಇದನ್ನೂ ಓದಿ... ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.