ಸೋಮವಾರ, ಮೇ 23, 2022
30 °C
ಶಬರ ಸಂಸ್ಥೆಯ ನಾಗರಾಜ ಜೋಶಿ ಮಾಹಿತಿ

ಶಿರಸಿ: ಮಣ್ಮನೆಯಲ್ಲಿ ನಮ್ಮೂರ ಹಬ್ಬ ನ.13, 14ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಗ್ರಾಮೀಣ ಕಲೆ, ಜಾನಪದ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಶಬರ ಸಂಸ್ಥೆ ಆಯೋಜಿಸುತ್ತಿರುವ ಹತ್ತನೆ ವರ್ಷದ ನಮ್ಮೂರ ಹಬ್ಬವನ್ನು ಕೊಡ್ನಗದ್ದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಣ್ಮನೆಯಲ್ಲಿ ನ.13, 14 ರಂದು ನಡೆಸಲಾಗುವುದು ಎಂದು ಸಂಸ್ಥೆಯ ಕಾರ್ಯದರ್ಶಿ ನಾಗರಾಜ ಜೋಶಿ ಸೊಂದಾ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಗ್ರಾಮದ ಜನರಿಗೆ ವಿವಿಧ ಸ್ಪರ್ಧೆಗಳ ಆಯೋಜನೆ, ಸ್ಥಳೀಯ ಕಲಾಪ್ರಕಾರಗಳಿಗೆ ವೇದಿಕೆ ಒದಗಿಸುವ ಜತೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಊರಿನ ಜನರಿಗೆ ಸನ್ಮಾನಿಸುವುದು ಹಬ್ಬದ ವಿಶೇಷ’ ಎಂದರು.

ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಉತ್ಸವ ಸಮಿತಿ ಅಧ್ಯಕ್ಷ ಪ್ರವೀಣ ಹೆಗಡೆ ಮಣ್ಮನೆ, ‘ನ.13 ರಂದು ಬೆಳಿಗ್ಗೆ ವೃಕ್ಷಪೂಜೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಸಂಜೆ 4.30 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಯುವ ಧುರೀಣ ಪ್ರಶಾಂತ ದೇಶಪಾಂಡೆ ಉದ್ಘಾಟಿಸಲಿದ್ದಾರೆ. ಕೊಡ್ನಗದ್ದೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರಾಜೇಶ್ವರಿ ಭಟ್ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಜಿ.ನಾಯಕ ಪಾಲ್ಗೊಳ್ಳುವರು’ ಎಂದರು.

‘ನ.14 ರಂದು ಸಂಜೆ 4.30 ರಿಂದ ನಡೆಯುವ ಸಮಾರೋಪ ಸಮಾರಂಭದಲ್ಲಿ ಮೆಣಸಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್.ಎಸ್.ಹೆಗಡೆ ಕೋಟಿಕೊಪ್ಪ, ಯಲ್ಲಾಪುರದ ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.