ಸೋಮವಾರ, ಅಕ್ಟೋಬರ್ 26, 2020
27 °C

ಕೊಂಕಣಿ ಸಾಹಿತಿ ವಿಶ್ವನಾಥ ಸುಬ್ರಾಯ ಶೇಟ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿದ್ದಾಪುರ: ಕೊಂಕಣಿ ಸಾಹಿತಿ, ತಾಲ್ಲೂಕಿನ ಹಾರ್ಸಿಕಟ್ಟಾದ ವಿಶ್ವನಾಥ ಸುಬ್ರಾಯ ಶೇಟ್(70) ಗುರುವಾರ ಬೆಳಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ. ಕೊಂಕಣಿ ಭಾಷೆಯಲ್ಲಿ ‘ಶ್ರೀರಾಮಚರಿತ’ ಎಂಬ ಮಹಾಕಾವ್ಯ ಮತ್ತು ಯಕ್ಷಗಾನ ಪ್ರಸಂಗಗಳು ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. ಹಲವು ಕೃತಿಗಳನ್ನು ಕನ್ನಡದಿಂದ ಕೊಂಕಣಿಗೆ ಅನುವಾದ ಮಾಡಿದ್ದಾರೆ.

ಯಕ್ಷಗಾನ ಜಾನಪದ ಅಕಾಡೆಮಿ ಪ್ರಶಸ್ತಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಮಣಿಪಾಲದ ಡಾ.ಟಿ.ಎಂ.ಎ.ಪೈ ಫೌಂಡೇಶನ್‌ನ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರ (‘ಶ್ರೀರಾಮಚರಿತ’ ಕಾವ್ಯಕ್ಕೆ) ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಕೇಂದ್ರದ ಕೊಂಕಣಿ ಜೀವನ ಸಿದ್ಧಿ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಅಶೋಕ ಪ್ರೌಢಶಾಲೆ ಜವಾನರಾಗಿ ನಿವೃತ್ತರಾಗಿದ್ದ ಅವರು ಯಕ್ಷಗಾನದ ವೇಷಭೂಷಣ ಸಿದ್ಧಗೊಳಿಸುತ್ತಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು