ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ: ಹೆಸರು ಸೇರ್ಪಡೆಗೆ ಅವಕಾಶ

Last Updated 1 ಸೆಪ್ಟೆಂಬರ್ 2019, 16:09 IST
ಅಕ್ಷರ ಗಾತ್ರ

ಶಿರಸಿ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಮತದಾರರ ನೋಂದಣಿ ಕಾರ್ಯಕ್ರಮಕ್ಕೆ ಭಾನುವಾರ ಇಲ್ಲಿ ಚಾಲನೆ ನೀಡಲಾಯಿತು.

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಶಾಂತವೀರ ಶಿವಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 2002ರ ಜನವರಿ 1ಕ್ಕಿಂತ ಮೊದಲು ಜನಿಸಿದವರು ಹಾಗೂ 18 ವರ್ಷ ತುಂಬಿದವರು ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿ ಕೈಬಿಟ್ಟು ಹೋದವರು, ವಿಳಾಸ ಬದಲಾವಣೆ, ಬೇರೆಡೆಗೆ ಹೆಸರು ವರ್ಗಾಯಿಸಲು ಬಯಸುವವರಿಗೂ ಪರಿಷ್ಕರಣೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಮೃತಪಟ್ಟವರು, ಅನರ್ಹರನ್ನು ಪಟ್ಟಿಯಿಂದ ಕಡಿಮೆ ಮಾಡಲು ಅವಕಾಶವಿದೆ ಎಂದರು.

ಉಪವಿಭಾಗಾಧಿಕಾರಿ ಡಾ. ಈಶ್ವರ ಉಳ್ಳಾಗಡ್ಡಿ ಮಾತನಾಡಿ, ‘ಚುನಾವಣಾ ಆಯೋಗದಿಂದ ಕಾಲಕಾಲಕ್ಕೆ ಮತದಾರರ ಪರಿಷ್ಕರಣೆ ನಡೆಯುತ್ತದೆ. ಈ ಬಾರಿ ಯಾವ ಮತದಾರನೂ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ವಿಶೇಷ ಕಾರ್ಯಕ್ರಮ ನಡೆಸಲಾಗುತ್ತಿದೆ. ಬಿಎಲ್ಒಗಳು ಮನೆ–ಮನೆಗೆ ತೆರಳಿ ಪರಿಶೀಲನೆ ನಡೆಸಿ ಮತದಾರರ ಪಟ್ಟಿ ಪರಿಷ್ಕರಿಸುತ್ತಾರೆ. ಮತದಾರರ ನೋಂದಣಿ ಕಾರ್ಯಕ್ರಮದಲ್ಲಿ ರಾಜಕೀಯ ಪಕ್ಷಗಳ ಪಾತ್ರ ಮಹತ್ವದ್ದಾಗಿದೆ. ಚುನಾವಣಾ ಅಧಿಕಾರಿಗಳ ಜೊತೆಗೆ ರಾಜಕೀಯ ಪಕ್ಷಗಳು ಬೂತ್ ಏಜೆಂಟರನ್ನು ನೇಮಿಸುವ ದಿಸೆಯಲ್ಲಿ ಸಹಕಾರ ನೀಡಬೇಕು. ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದವರು, ನಕಲಿ ಮತದಾರರು, ಅಕ್ರಮ ಮತದಾರರನ್ನು ಪತ್ತೆ ಹಚ್ಚಲು ಇದರಿಂದ ಅನುಕೂಲವಾಗಲಿದೆ’ ಎಂದರು. ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಸ್ವಾಗತಿಸಿದರು. ಶ್ರೀಧರ ಹೆಗಡೆ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT