ಬುಧವಾರ, ನವೆಂಬರ್ 25, 2020
21 °C

ಕಾರವಾರ: ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ವಿಧಾನಪರಿಷತ್‌ನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯುತ್ತಿದೆ. ನಗರದ ಸೇಂಟ್ ಮೈಕಲ್ಸ್ ಕಾನ್ವೆಂಟ್‌ನಲ್ಲಿ ತೆರೆಯಲಾಗಿರುವ ಮತಗಟ್ಟೆಯಲ್ಲಿ ಮತದಾರರು ಸಾಲಾಗಿ ನಿಂತು ಹಕ್ಕು ಚಲಾಯಿಸುತ್ತಿದ್ದಾರೆ.

ಜಿಲ್ಲೆಯಲ್ಲಿ 13,148 ಮತದಾರರಿದ್ದು, 23 ಸ್ಥಳಗಳಲ್ಲಿ 26 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಕಾರವಾರದ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಉಪ ವಿಭಾಗಾಧಿಕಾರಿ ಪ್ರಿಯಾಂಗಾ, ತಹಶೀಲ್ದಾರ್ ಆರ್.ವಿ.ಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು.

ಮತದಾರರಿಗೆ ಸ್ಯಾನಿಟೈಸರ್, ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದ‌್ದು, ಕೋವಿಡ್ ಪೀಡಿತರಿಗೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.