ಬುಧವಾರ, ಅಕ್ಟೋಬರ್ 21, 2020
24 °C

ಸಹಕಾರಿ ಧುರೀಣ ವಿ.ಎಸ್.ಸೋಂದೆ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಸಹಕಾರಿ ಧುರೀಣ ವಿ.ಎಸ್.ಸೋಂದೆ  (90) ವಯೋಸಹಜ ಅನಾರೋಗ್ಯದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.

ಶಿರಸಿ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ 32 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಮಾಡರ್ನ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷರಾಗಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಯಲ್ಲಿಯೂ ಮಹತ್ವದ ಪಾತ್ರ ನಿರ್ವಹಿಸಿದ್ದರು.

ಇತಿಹಾಸದ ಸಂಶೋಧನೆ ಕುರಿತು ಆಸಕ್ತಿ ಹೊಂದಿದ್ದ ಅವರು ಅನೇಕ ಲೇಖನ ಬರೆದಿದ್ದರು. ಸಾಮಾಜಿಕ ಚಟುವಟಿಕೆಯಲ್ಲಿಯೂ ಸದಾ ಮುಂಚೂಣಿಯಲ್ಲಿದ್ದರು. 1996ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು. ಮೃತರಿಗೆ ನಾಲ್ವರು ಪುತ್ರಿಯರು, ಒಬ್ಬ ಸಹೋದರ ಇದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.