29ರಿಂದ ತರಗತಿಗಳ ಪುನರಾರಂಭ: ಶಾಲೆಗಳಲ್ಲಿ ನೀರಿನ ಸಮಸ್ಯೆಯ ಆತಂಕ

ಬುಧವಾರ, ಜೂನ್ 19, 2019
22 °C
ಜೊಯಿಡಾ

29ರಿಂದ ತರಗತಿಗಳ ಪುನರಾರಂಭ: ಶಾಲೆಗಳಲ್ಲಿ ನೀರಿನ ಸಮಸ್ಯೆಯ ಆತಂಕ

Published:
Updated:
Prajavani

ಜೊಯಿಡಾ: ಪ್ರತಿ ವರ್ಷದಂತೆ ಶೈಕ್ಷಣಿಕ ವರ್ಷವು ಮೇ 29ರಂದು ಪ್ರಾರಂಭವಾಗಿದೆ. ಇದಕ್ಕಾಗಿ ಶಿಕ್ಷಕರು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ. ತಾಲ್ಲೂಕಿನ ಬಹುತೇಕ ಶಾಲೆಗಳಿಗೆ ಶಿಕ್ಷಕರು ಮಂಗಳವಾರವೇ ತೆರಳಿದ್ದರು. ವಿದ್ಯಾರ್ಥಿಗಳು ಹಾಗೂ ಅಡುಗೆ ಸಹಾಯಕರ ನೆರವಿನೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಂಡರು. 

ಈ ಬಾರಿ ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕುಡಿಯುವ ನೀರಿನ ಸಮಸ್ಯೆ ಶಾಲೆಗಳಿಗೂ ಗಂಭೀರವಾಗಿ ಕಾಡುವ ಆತಂಕ ಎದುರಾಗಿದೆ. ತಾಲ್ಲೂಕಿನಲ್ಲಿ 170 ಶಾಲೆಗಳಿದ್ದು, ಹೆಚ್ಚಿನ ಕಡೆಗಳಲ್ಲಿ ನೈಸರ್ಗಿಕವಾಗಿ ಹರಿಯುವ ನೀರನ್ನು ಪೈಪ್ ಮೂಲಕ ತಂದು ಬಳಸಲಾಗುತ್ತಿದೆ.

ಈಗ ಝರಿಯ ಮೂಲಗಳು ಬತ್ತಿವೆ. ಕೆಲವು ಶಾಲೆಗಳಲ್ಲಿರುವ ಬಾವಿಗಳು ಹಾಗೂ ಕೊಳವೆ ಬಾವಿಗಳೂ ಒಣಗಿವೆ. ಇದರಿಂದ ಬಿಸಿಯೂಟಕ್ಕೆ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಬಹುತೇಕ ಶಾಲೆಗಳಲ್ಲಿ ಶೌಚಾಲಯಗಳಿವೆ. ಆದರೆ, ಅಲ್ಲಿಯೂ ನೀರಿನ ಕೊರತೆ ಕಾಣಿಸಿಕೊಳ್ಳಬಹುದು. ಹಾಗಾಗಿ ಪರ್ಯಾಯ ವ್ಯವಸ್ಥೆಯೇನು ಎಂಬ ಚಿಂತೆ ಶಾಲಾಡಳಿತದ್ದಾಗಿದೆ.

‘ತಾಲ್ಲೂಕಿನ ಶೇ 50ಕ್ಕಿಂತ ಹೆಚ್ಚು ಶಾಲೆಗಳಲ್ಲಿ ನೀರಿನ ಸಮಸ್ಯೆ ಇದೆ. ಇದಕ್ಕಾಗಿ ಏ.15ರಂದು ಎಲ್ಲ ಶಿಕ್ಷಕರ ಸಭೆ ನಡೆಸಲಾಗಿತ್ತು. ಗ್ರಾಮ ಪಂಚಾಯ್ತಿ ಅಥವಾ ತಾಲ್ಲೂಕು ಆಡಳಿತದಿಂದ ಗ್ರಾಮಗಳಿಗೆ ಪೂರೈಸುವ ನೀರನ್ನು ಶಾಲೆಗಳಿಗೂ  ಬಳಸಿಕೊಳ್ಳುವಂತೆ ಸೂಚಿಸಲಾಗಿದೆ. ಶಾಲೆಯ ಪ್ರಾರಂಭದ ದಿನ ಎಲ್ಲ ಶಾಲೆಗಳಲ್ಲೂ ಬಿಸಿಯೂಟದ ಜೊತೆಗೆ ಶುದ್ಧ ಕುಡಿಯುವ ನೀರನ್ನು ಮಕ್ಕಳಿಗೆ ನೀಡುವಂತೆಯೂ ನಿರ್ದೇಶನ ನೀಡಲಾಗಿದೆ’ ಎಂದು ತಾಲ್ಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎ.ರೆಹಮಾನ್ ತಿಳಿಸಿದರು.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !