ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಕಾರ್ಯ ನಿರ್ವಹಿಸದ ಶುದ್ಧ ನೀರಿನ ಘಟಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ತಾಲ್ಲೂಕಿನ ಗೋಟೆಗಾಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಇದ್ದೂ ಇಲ್ಲದಂತಾಗಿದೆ. ಒಂದೂವರೆ ವರ್ಷದ ಹಿಂದೆ ಸ್ಥಾ‍ಪಿಸಲಾದ ಯಂತ್ರಗಳು ತುಕ್ಕು ಹಿಡಿಯುತ್ತಿವೆ.

ಹೆದ್ದಾರಿಯ ಪಕ್ಕದಲ್ಲೇ ಇರುವ ಈ ಘಟಕವನ್ನು ಒಂದೂವರೆ ವರ್ಷದ ಹಿಂದೆ ಸ್ಥಾಪಿಸಿ ನೀರು ಮತ್ತು ವಿದ್ಯುತ್ ಸಂಪರ್ಕ ನೀಡಲಾಗಿದೆ. ಪಕ್ಕದಲ್ಲೇ ಸ್ಥಾಪಿಸಲಾಗಿರುವ ನೀರಿನ ಟ್ಯಾಂಕ್‌ಗೆ ಗೋಟೆಗಾಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದಲೇ ಪೈಪ್‌ ಅಳವಡಿಸಲಾಗಿದೆ.

‘ನೀರಿನ ಘಟಕವನ್ನು ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಲ್ಲ ಸೇರಿ ಉದ್ಘಾಟನೆ ಮಾಡಿ ಫೋಟೊ ತೆಗೆಸಿಕೊಂಡರು. ಒಂದೆರಡು ತಿಂಗಳು ಸರಿಯಿತ್ತು. ಆದರೆ, ಈಗ ಕಾರ್ಯ ನಿರ್ವಹಿಸುತ್ತಿಲ್ಲ. ಸರ್ಕಾರದ ಹಣ ವ್ಯರ್ಥವಾಗುತ್ತಿದೆ’ ಎಂದು ಸ್ಥಳೀಯರಾದ ಚಂದ್ರಹಾಸ ಪೆಡ್ನೇಕರ್ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು