ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡುಕೋಣದ ಮಾಂಸ ಸಾಗಣೆ: ಆರೋಪಿ ನಾಪತ್ತೆ

Last Updated 22 ಫೆಬ್ರುವರಿ 2021, 8:12 IST
ಅಕ್ಷರ ಗಾತ್ರ

ಭಟ್ಕಳ: ಕಾಡುಕೋಣದ ಮಾಂಸವನ್ನು ಕಾರಿನಲ್ಲಿ ಸಾಗಿಸುವ ಖಚಿತ ಮಾಹಿತಿ ಮೇರೆಗೆ ಸೋಮವಾರ ದಾಳಿ ನಡೆಸಿದ ಅರಣ್ಯ ಅಧಿಕಾರಿಗಳು, ಕಾರಿನ ಸಮೇತ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಕಾರು ಚಾಲಕ ನಾಪತ್ತೆಯಾಗಿದ್ದೇನೆ.

ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪ ಭಾಗದಲ್ಲಿ ಕಾಡುಕೋಣ ಬೇಟೆಯಾಡಿ ಅದರ ಮಾಂಸವನ್ನು ಕಾರಿನಲ್ಲಿ ತುಂಬಿಸಿಕೊಂಡು ಭಟ್ಕಳದ ಕಡೆಗೆ ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ಶಿರಾಲಿ ಚೆಕ್ ಪೋಸ್ಟ್ ಬಳಿ ಬ್ಯಾರಿಕೇಡ್ ಅಡ್ಡ ಹಾಕಿ ಕಾರನ್ನು ತಡೆಯಲು ಯತ್ನಿಸಿದರು. ಬ್ಯಾರಿಕ್ಯಾಡ್‍ಗೆ ಡಿಕ್ಕಿ ಹೊಡೆದು ಮುಂದೆ ಸಾಗಿದ ಕಾರು, ಜಾಲಿ ಪಟ್ಟಣದ ಬದ್ರಿಯಾ ಕಾಲೊನಿಯ ಮನೆಯೊಂದರ ಮುಂದೆ ಪತ್ತೆಯಾಗಿದೆ.

ಕ್ರೇನ್ ಮೂಲಕ ಕಾರನ್ನು ಅರಣ್ಯ ಕಚೇರಿಗೆ ತಂದು ಪರಿಶೀಲಿಸಿದಾಗ ಅಂದಾಜು 100 ಕೆ.ಜಿ.ಗೂ ಹೆಚ್ಚು ತೂಕದ ಕಾಡುಕೋಣದ ಮಾಂಸ ಪತ್ತೆಯಾಗಿದೆ. ವಲಯ ಅರಣ್ಯಾಧಿಕಾರಿ ಸವಿತಾ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT