ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಕೋಲಾ: ಕಾರು - ಬಸ್ ಡಿಕ್ಕಿ, ಮಹಿಳೆ ಸ್ಥಳದಲ್ಲೇ ಸಾವು

Last Updated 31 ಜನವರಿ 2021, 12:55 IST
ಅಕ್ಷರ ಗಾತ್ರ

ಅಂಕೋಲಾ: ತಾಲ್ಲೂಕಿನ ಮಾಸ್ತಿಕಟ್ಟೆ ಬಳಿ ಭಾನುವಾರ, ಚಾಲಕನ ನಿಯಂತ್ರಣ ತಪ್ಪಿದ ಕಾರು, ಚಲಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ರೇಖಾ (28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗಿಗಳು ಎಂದು ತಿಳಿದುಬಂದಿದೆ. ಕಾರು ಅಂಕೋಲಾದಿಂದ ಯಲ್ಲಾಪುರದ ಕಡೆಗೆ ಸಾಗುತ್ತಿತ್ತು. ಯಲ್ಲಾಪುರದಿಂದ ಅಂಕೋಲಾ ಕಡೆಗೆ ಬರುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗೆ ಡಿಕ್ಕಿ ಹೊಡೆಯಿತು. ಗಂಭೀರವಾಗಿ ಗಾಯಗೊಂಡ ಮೇಘಾ, ಯು.ಬಿ.ಮಿಸ್ತ್ರಿ, ಎಂ.ಎಂ.ಮುಲ್ಲಾ ಅವರನ್ನು ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿ.ಪಿ.ಐ ಕೃಷ್ಣಾನಂದ ನಾಯ್ಕ ತನಿಖೆ ಕೈಗೊಂಡಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ ಸಂತೋಷ ನಾಯ್ಕ ಹಾಗೂ ‘108’ ಆಂಬುಲೆನ್ಸ್ ಸಿಬ್ಬಂದಿ ಶಾಂತಾರಾಮ ನಾಯಕ ಮತ್ತು ಕುಸುಮಾ ನಾಯಕ ಗಾಯಾಳುಗಳನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲು ನೆರವಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT