ಮಂಗಳವಾರ, ಜೂಲೈ 7, 2020
22 °C

ಉತ್ತರ ಕನ್ನಡ | ಐಸೋಲೇಷನ್ ವಾರ್ಡ್‌ನಲ್ಲಿದ್ದ ವೃದ್ಧೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲ್ಲಾಪುರ: ಪಟ್ಟಣದ ತಾಲ್ಲೂಕು ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿದ್ದ 69 ವರ್ಷದ ಹಿರಿಯ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟರು. ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬರಬೇಕಿದೆ. 

ಮಹಾರಾಷ್ಟ್ರದ ಠಾಣೆಯಲ್ಲಿ ವಾಸವಾಗಿದ್ದ ಅವರ ಪತಿ ಎಂಟು ದಿನಗಳ ಹಿಂದೆ ಮೃತಪಟ್ಟಿದ್ದರು. ಯಲ್ಲಾಪುರದಲ್ಲಿರುವ ಮಗನ ಮನೆಗೆ ಜೂನ್ 25ರಂದು ಬಂದಿದ್ದ ಅವರನ್ನು ಐಸೋಲೇಷನ್ ವಾರ್ಡಿಗೆ ದಾಖಲಿಸಲಾಗಿತ್ತು. ಅವರ ಗಂಟಲು ದ್ರವದ ಪರೀಕ್ಷೆಯ ವರದಿ ಬರುವ ಮೊದಲೇ ಮೃತಪಟ್ಟಿದ್ದಾರೆ. ಮರಣದ ನಂತರ ಮತ್ತೊಮ್ಮೆ ಗಂಟಲು ದ್ರವವನ್ನು ತೆಗೆದು ಪರೀಕ್ಷೆಗೆ ಕಳುಹಿಸಲಾಗಿದೆ.

‘ಮೃತ ಮಹಿಳೆಗೆ ಕೋವಿಡ್‌ನ ಯಾವುದೇ ಲಕ್ಷಣಗಳು ಇರಲಿಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೋವಿಡ್ ಪರೀಕ್ಷೆಯ ವರದಿ ಬಾರದೇ ಇದ್ದರೂ ಅಂತ್ಯಕ್ರಿಯೆಯಲ್ಲಿ ಸೋಂಕಿತರಿಗೆ ಮಾಡುವ ಪ್ರಕ್ರಿಯೆಗಳನ್ನೇ ಅನುಸರಿಸಲಾಗುವುದು’ ಎಂದು ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ನರೇಂದ್ರ ಪವಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು