ಮಂಗಳವಾರ, ಸೆಪ್ಟೆಂಬರ್ 28, 2021
24 °C
ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿದ ಅನು ಕಳಸ ಕಳವಳ

ಜನಸಂಖ್ಯೆ ಹೆಚ್ಚಳದಿಂದ ನೂರಾರು ಸಮಸ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾಎದಲ್ಲಿ ಬುಧವಾರ ಆಯೋಜಿಸಲಾದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಶಿವಜ್ಯೋತಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಅನು ಕಳಸ ಮಾತನಾಡಿದರು

ಕಾರವಾರ: ‘ಜನಸಂಖ್ಯೆ ಹೆಚ್ಚಳದಿಂದ ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುತ್ತವೆ. ಅಲ್ಲದೇ ದೇಶದ ಅಭಿವೃದ್ಧಿಗೆ ಮಾರಕವಅಗಿ ಪರಿಣಮಿಸುತ್ತದೆ’ ಎಂದು ಶಿವಜ್ಯೋತಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಅನು ಕಳಸ ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.  ದೇಶದಲ್ಲಿ ಮಿತಿಮೀರಿದ ಜನಸಂಖ್ಯೆ ಒಂದು ಸಮಸ್ಯೆ ಆಗಿದೆ. ಇದರಿಂದ ಬಡತನ, ನಿರುದ್ಯೋಗ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ದೇಶ ಸಂಪದ್ಭರಿತ ದೇಶವಾಗಬೇಕಾದರೆ ಜನಸಂಖ್ಯೆ ನಿಯಂತ್ರಣ ಅತ್ಯಗತ್ಯವಾಗಿದೆ ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಜಿ.ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ‘ಜನಸಂಖ್ಯೆ ವೃದ್ಧಿಯಲ್ಲಿ ಸ್ಥಿರತೆಯನ್ನು ಸಾಧಿಸದಿದ್ದಲ್ಲಿ ದೇಶದ ಅಭಿವೃದ್ಧಿ ಕಾರ್ಯಗಳು ಯಶಸ್ಸನ್ನು ಕಾಣಲಾರವು. ಯೋಜನಾಬದ್ಧ ಕುಟುಂಬ ಇದಕ್ಕೆ ಸೂಕ್ತ ಪರಿಹಾರವಾಗಿದೆ’ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಎನ್ ಅಶೋಕಕುಮಾರ ಮಾತನಾಡಿ, ‘ವಿಶ್ವದ ಜನಸಂಖ್ಯೆ 718 ಕೋಟಿ ಇದ್ದು, ಭಾರತದ ಕೊಡುಗೆ ಶೇ 17ರಷ್ಟಿದೆ. ಇವರೆಲ್ಲರಿಗೂ ಪೌಷ್ಟಿಕ ಆಹಾರ, ಶುದ್ಧ ಕುಡಿಯುವ ನೀರು, ವಸತಿ ಸೌಲಭ್ಯಗಳಂತಹ ಮೂಲಸೌಕರ್ಯಗಳನ್ನು ಒದಗಿಸುವುದು ಸವಾಲಿನ ಕೆಲಸವಾಗುತ್ತದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣ ಅತ್ಯಗತ್ಯವಾಗಿರುತ್ತದೆ’ ಎಂದು ಹೇಳಿದರು.

ಕಾರವಾರ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ವಿ.ಎಂ.ಗಿರಿ ಜನಸಂಖ್ಯೆ ಮತ್ತು ಲಿಂಗ ಸಮಾನತೆ ಕುರಿತು ಉಪನ್ಯಾಸ ನೀಡಿದರು. ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು