ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಮೂರು ತಿಂಗಳ ಬಳಿಕ ಶೂನ್ಯ ಸಾಧನೆ

Last Updated 12 ಜುಲೈ 2021, 14:46 IST
ಅಕ್ಷರ ಗಾತ್ರ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕಿತರು ಪತ್ತೆಯಾದ ತಾಲ್ಲೂಕಿನಲ್ಲಿ ಮೂರು ತಿಂಗಳ ಬಳಿಕ ಜು.12 ರಂದು ಶೂನ್ಯ ಸಾಧನೆ ಮಾಡಿದೆ.

ಕಳೆದ ಏಪ್ರಿಲ್ 12 ರಂದು ಒಂದೂ ಸೋಂಕಿನ ಪ್ರಕರಣ ದಾಖಲಾಗಿರಲಿಲ್ಲ. ಆ ಬಳಿಕ ಇದೇ ಮೊದಲ ಬಾರಿಗೆ ಪ್ರಕರಣ ದಾಖಲಾಗಿಲ್ಲ. ಭಾನುವಾರ ತಾಲ್ಲೂಕಿನ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಸಂಗ್ರಹಿಸಿದ್ದ 210ರಷ್ಟು ಗಂಟಲುದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.

ಕಳೆದ ಮೇ ತಿಂಗಳಲ್ಲಿ ಕೋವಿಡ್ ಸೋಂಕಿನ ದರದಲ್ಲಿ ತಾಲ್ಲೂಕು ಮುಂಚೂಣಿಯಲ್ಲಿತ್ತು. ಬನವಾಸಿ, ಭಾಶಿ ಭಾಗದಲ್ಲಿ ಅತಿಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದವು. ಶೇ.80ರ ವರೆಗೆ ತಲುಪಿದ್ದ ಪಾಸಿಟಿವಿಟಿ ದರ ಜನರಲ್ಲಿ ಆತಂಕ ಹುಟ್ಟಿಸಿತ್ತು. ಮೇ 15 ರಂದು ಒಂದೇ ದಿನ 214 ಪ್ರಕರಣ ದಾಖಲಾಗಿದ್ದವು. ಮೇ 19 ರಂದು 199 ಪ್ರಕರಣ ದಾಖಲಾಗಿತ್ತು. ದಿನವೂ ಸರಾಸರಿ ನೂರಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ಜೂನ್ ಮಧ್ಯಂತರದ ಬಳಿಕ ಈ ಪ್ರಮಾಣ ಇಳಿಕೆಯಾಗಿತ್ತು.

ತಾಲ್ಲೂಕಿನಲ್ಲಿ ಈವರೆಗೆ 6980 ಕೋವಿಡ್ ಪ್ರಕರಣ ದಾಖಲಾಗಿದ್ದು, 107 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಎಂಟು ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಕಳೆದ ಹದಿನೈದು ದಿನದಲ್ಲಿ ತಾಲ್ಲೂಕಿನಲ್ಲಿ ಸೋಂಕಿನ ಪ್ರಮಾಣ ತೀರಾ ಇಳಿಕೆಯಾಗಿದೆ. ಆದರೂ ಇಲಾಖೆ ಸೂಚನೆಯಂತೆ ಗಂಟಲುದ್ರವ ಮಾದರಿ ಸಂಗ್ರಹಿಸುವ ಪ್ರಮಾಣದಲ್ಲಿ ಸ್ಥಿರತೆ ಕಾಯ್ದುಕೊಳ್ಳಲಾಗುತ್ತಿದೆ. ಶುನ್ಯ ಪ್ರಕರಣ ವರದಿ ದಾಖಲಾಗಿದ್ದು ಸಮಾಧಾನ ತಂದಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ಟ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT