ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಕೋಲಾ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Last Updated 15 ಮಾರ್ಚ್ 2023, 11:31 IST
ಅಕ್ಷರ ಗಾತ್ರ

ಅಂಕೋಲಾ: ತಾಲ್ಲೂಕಿನ ಬೆಳಂಬಾರ ತಾಳೇಬೈಲಿನ ಶಿಲ್ಪಾ ಎಂ.ಗೌಡ (17) ವಿಷ ಸೇವಿಸಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈಕೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದಳು. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಈಕೆ ಎರಡು ವಿಷಯದ ಪರೀಕ್ಷೆಯನ್ನು ಬರೆದಿದ್ದಳು.

‘ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿದ್ದಾಳೆ. ಅಸ್ವಸ್ಥಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತ ಪಟ್ಟಿದ್ದಾಳೆ’ ಎಂದು ಕುಟುಂಬ ಮೂಲಗಳು ತಿಳಿಸಿವೆ.

‘ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರೀಕ್ಷೆ ನಿರೀಕ್ಷೆಯಷ್ಟು ಚೆನ್ನಾಗಿ ಮಾಡಿಲ್ಲ ಎಂಬ ಬೇಸರಕ್ಕೆ ಸಾವಿಗೆ ಶರಣಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಇನ್ನಷ್ಟೆ ಖಚಿತಪಡಿಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT