ಕಾರವಾರ: ತಾಲ್ಲೂಕಿನ ಕದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ನಾಲ್ಕು ಕ್ರಸ್ಟ್ ಗೇಟ್‍ಗಳ ಮೂಲಕ 30 ಸಾವಿರ ಕ್ಯುಸೆಕ್ ನೀರನ್ನು ಹೊರಕ್ಕೆ ಬಿಡಲಾಯಿತು.

34.50 ಮೀಟರ್ ಗರಿಷ್ಠ ನೀರು ಸಂಗ್ರಹಣಾ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯ 30.33 ಮೀ. ಎತ್ತರದವರೆಗೆ ನೀರು ಸಂಗ್ರಹವಾಗಿದೆ. ಜೊಯಿಡಾ, ಕೈಗಾ, ಯಲ್ಲಾಪುರ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರತೊಡಗಿದೆ.

‘ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣ 19,676 ಕ್ಯುಸೆಕ್ ಇದ್ದು ನೀರಿನ ಮಟ್ಟ ಏರಿಕೆಯಾಗುತ್ತಿದೆ. ಪ್ರವಾಹ ಉಂಟಾಗುವುದನ್ನು ತಡೆಯುವ ನಿಟ್ಟಿನಲ್ಲಿ ಅಣೆಕಟ್ಟೆಯಲ್ಲಿ ಗರಿಷ್ಠ 31 ಮೀಟರ್ ಸಂಗ್ರಹಣಾ ಸಾಮರ್ಥ್ಯವನ್ನು ಜಿಲ್ಲಾಡಳಿತ ನಿಗದಿಪಡಿಸಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನೀರು ಹೊರಕ್ಕೆ ಬಿಡಲಾಗುತ್ತಿದೆ. ಪ್ರತಿ ಗೇಟ್ ಮೂಲಕ ತಲಾ 7 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ’ ಎಂದು ಕೆಪಿಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.