ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಟಾ: ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ ಕುಸಿತ

ಕುಮಟಾ ತಾಲ್ಲೂಕಿನ ಮಿರ್ಜಾನ್–ಹೆಗಡೆ ತಾರಿಬಾಗಿಲ ಗ್ರಾಮಗಳನ್ನು ಸಂಪರ್ಕಿಸಲು ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ
Published 27 ಮಾರ್ಚ್ 2024, 13:27 IST
Last Updated 27 ಮಾರ್ಚ್ 2024, 13:27 IST
ಅಕ್ಷರ ಗಾತ್ರ

ಕುಮಟಾ: ಕುಮಟಾ ತಾಲ್ಲೂಕಿನ ಮಿರ್ಜಾನ್–ಹೆಗಡೆ ತಾರಿಬಾಗಿಲ ಗ್ರಾಮಗಳನ್ನು ಸಂಪರ್ಕಿಸಲು ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆಯ ಮಧ್ಯಭಾಗ ಬುಧವಾರ ಕುಸಿದು ಬಿದ್ದಿದೆ.

ಸೇತುವೆಯ ಒಂದು ಕಂಬದಿಂದ ಇನ್ನೊಂದು ಕಂಬಕ್ಕೆ ಅಳವಡಿಸಿದ್ದ ಕಾಂಕ್ರೀಟ್ ತೊಲೆ (ಬೀಮ್) ಏಕಾಏಕಿ ಕುಸಿದು ಬಿದ್ದ ಪರಿಣಾಮ ಬೃಹತ್ ಗಾತ್ರದ ಕ್ರೇನ್, ಹಿಟಾಚಿ, ದ್ವಿಚಕ್ರ ವಾಹನ ಸೇರಿದಂತೆ ಕೋಟ್ಯಂತರ ಮೌಲ್ಯದ ಪರಿಕರಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

‘₹18 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗುತ್ತಿದೆ. ಒಂದು ವರ್ಷದಿಂದ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೆ ಶೇ.40ಕ್ಕಿಂತ ಹೆಚ್ಚು ಭಾಗದ ಕಾಮಗಾರಿ ನಡೆದಿದ್ದು, ಎರಡು ಕಂಬಗಳ ನಡುವೆ ಜೋಡಿಸಿಟ್ಟಿದ್ದ ಕಾಂಕ್ರೀಟ್ ತೊಲೆ ಕುಸಿದು ಹಾನಿ ಉಂಟಾಗಿದೆ. ಅಂದಾಜು ₹4 ಕೋಟಿ ಮೌಲ್ಯದ ಪರಿಕರ ಹಾನಿಯಾಗಿದ್ದು, ತೊಲೆ ಕುಸಿದಿದ್ದರಿಂದ ₹50 ಲಕ್ಷದಷ್ಟು ನಷ್ಟ ಉಂಟಾಗಿದೆ. ಕಾಮಗಾರಿ ವೇಳೆ ಕ್ರೇನ್ ಬಡಿದು ತೊಲೆ ಕುಸಿದು ಬಿದ್ದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಪರಿಶೀಲನೆ ಕೈಗೊಳ್ಳಲಾಗಿದೆ’ ಎಂದು ಪಿಡಬ್ಲ್ಯೂಡಿ ಎಇಇ ಎಂ.ಪಿ.ನಾಯ್ಕ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT