ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಸಿ | ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಸೇರಿದ ಜಿಮ್‌ನಲ್ಲಿ ಬೆಂಕಿ ಅವಘಡ

Published 25 ಜೂನ್ 2024, 6:26 IST
Last Updated 25 ಜೂನ್ 2024, 6:26 IST
ಅಕ್ಷರ ಗಾತ್ರ

ಶಿರಸಿ: ಉತ್ತರ ಕನ್ನಡ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಮನೆಯ ಜಿಮ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಜಿಮ್ ಉಪಕರಣಗಳು ಸುಟ್ಟು ಕರಕಲಾದ ಘಟನೆ ಮಂಗಳವಾರ ನಡೆದಿದೆ.

ನಗರದ ಕೆ.ಎಚ್.ಬಿ. ಕಾಲೋನಿಯಲ್ಲಿರುವ ಅನಂತಕುಮಾರ ಹೆಗಡೆಯವರ ಮನೆಯೊಳಗಿನ ಜಿಮ್‌ನಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿತ್ತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.

ಬೆಂಕಿಯಿಂದ ಜಿಮ್‌ನಲ್ಲಿ ಇದ್ದ ಉಪಕರಣಗಳು ಹಲವು ಸುಟ್ಟು ಹಾನಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲಕ್ಕೆ ಬಂದು ಹೆಚ್ಚಿನ ಅನಾಹುತ ತಡೆದಿದ್ದಾರೆ. ಮಾಜಿ ಸಂಸದ ಮತ್ತು ಅವರ ಕುಟುಂಬದವರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಘಟನೆ‌ ನಡೆದಿದ್ದು, ಮನೆಯ ಕಾವಲುಗಾರರಿಂದ ಘಟನೆ ಬೆಳಕಿಗೆ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT