ಭಟ್ಕಳ (ಉತ್ತರ ಕನ್ನಡ ಜಿಲ್ಲೆ): ತೀವ್ರ ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಮಣ್ಕುಳಿಯ ನಾಗರಾಜ ನಾಯ್ಕ (38) ಮಂಗಳೂರಿನ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದು, ಇಲಿಜ್ವರ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

‘ಚಿಕಿತ್ಸೆಗೆಂದು ಕೆಲ ದಿನಗಳ ಹಿಂದೆ ತಾಲ್ಲೂಕು ಆಸ್ಪತ್ರೆಗೆ ಬಂದಿದ್ದ ನಾಗರಾಜ ನಾಯ್ಕ ಅವರಿಗೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ತೆರಳಲು ಸೂಚಿಸಲಾಗಿತ್ತು. ಬಿಳಿ ರಕ್ತಕಣಗಳ ಕೊರತೆಯಿಂದ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂಬುದಾಗಿ ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಇಲಿಜ್ವರದ ಶಂಕೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮೃತರ ಮನೆ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ತಪಾಸಣೆ ನಡೆಸಲಾಗಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಸವಿತಾ ಕಾಮತ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.