ದಾಂಡೇಲಿ: ಅಂಬೆವಾಡಿಯ ರೈಲು ನಿಲ್ದಾಣದ ಹತ್ತಿರ ಬರ್ಚಿ ರಸ್ತೆಯಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಮಕ್ಕಳು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

ಬರ್ಚಿ ಮಾರ್ಗವಾಗಿ ದಾಂಡೇಲಿಗೆ ಬರುತ್ತಿದ್ದ ಬೈಕ್ ಸವಾರ ಹಾಗೂ ದಾಂಡೇಲಿಯಿಂದ ಮೌಳಂಗಿಗೆ ಹೋಗುತ್ತಿದ್ದ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಕಾರಣ ಬೈಕ್ನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಸಾರ್ವಜನಿಕರು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಇಮ್ತಿಯಾಜ್ ಪಟೇಲ್, ಆಸೀಫ್ ಪಟೇಲ್, ಹಾಗು ಸಿಮ್ರಾನ್ ಪಟೇಲ್ಗೆ ಧಾರವಾಡಕ್ಕೆ ಕಳಿಸಲಾಗಿದೆ.

ಭೀಮರಾವ್ ಕೆಂಭಾವಿ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.