ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊನ್ನಾವರ | ಬೈಕ್‌ನಿಂದ ಬಿದ್ದು ಮಹಿಳೆ ಸಾವು

Published 10 ಜುಲೈ 2024, 15:27 IST
Last Updated 10 ಜುಲೈ 2024, 15:27 IST
ಅಕ್ಷರ ಗಾತ್ರ

ಹೊನ್ನಾವರ: ತಾಲ್ಲೂಕಿನ ಹಳದೀಪುರ ಸಾಲಿಕೇರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ಬೈಕ್‌ನಿಂದ ಮಹಿಳೆಯೊಬ್ಬರು ಬಿದ್ದು ಮೃತಪಟ್ಟಿದ್ದಾರೆ.

ಕುಮಟಾ ತಾಲ್ಲೂಕಿನ ಹೆರವಟ್ಟಾ ಹೊಸಹಿತ್ಲ ನಿವಾಸಿ, ವೃತ್ತಿಯಲ್ಲಿ ಬ್ಯೂಟಿಷಿಯನ್ ಆಗಿದ್ದ ಜಯಶ್ರೀ ನಾಗು ಗೌಡ(44) ಮೃತರು.

’ಜಯಶ್ರೀ ತಮ್ಮ ಪತಿ ಚಲಾಯಿಸುತ್ತಿದ್ದ ಬೈಕ್ ಹಿಂಬದಿಯಲ್ಲಿ ಕುಳಿತಿದ್ದರು.ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ  ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕೊಂಡೊಯ್ಯುತ್ತಿದ್ದಾಗ ಬ್ರಹ್ಮಾವರ ಸಮೀಪ ಮೃತಪಟ್ಟಿದ್ದಾರೆ‘ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT