ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದರ್ಶ ನಗರ ನಿವಾಸಿಗಳಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ

Last Updated 4 ಮಾರ್ಚ್ 2023, 5:57 IST
ಅಕ್ಷರ ಗಾತ್ರ

ಶಿರಸಿ: ತಾಲ್ಲೂಕಿನ ಬನವಾಸಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆದರ್ಶನಗರ ಮೂಲಭೂತ ಸೌಕರ್ಯ ವಂಚಿತವಾಗಿದ್ದು, ತಕ್ಷಣ ಸೌಲಭ್ಯ ಕಲ್ಪಿಸದಿದ್ದರೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಇಲ್ಲಿನ ನಿವಾಸಿಗಳು ಎಚ್ಚರಿಸಿದ್ದಾರೆ.

50ಕ್ಕೂ ಅಧಿಕ ಮನೆಗಳಿರುವ ಆದರ್ಶ ನಗರದಲ್ಲಿ ಮೂಲಭೂತ ಸೌಕರ್ಯಗಳೇ ಮರೆಯಾಗಿದೆ. ಇಲ್ಲಿನ ರಸ್ತೆಗಳಿಗೆ ಡಾಂಬರ್, ಕಾಂಕ್ರೀಟ್ ಭಾಗ್ಯವೇ ಇಲ್ಲ. ಚರಂಡಿ ವ್ಯವಸ್ಥೆ ಇಲ್ಲವೇ ಇಲ್ಲ. ಗ್ರಾಮ ಪಂಚಾಯ್ತಿಗೆ ತೆರಿಗೆ ಕಟ್ಟುತ್ತಿದ್ದರು ಮೂಲ ಸೌಕರ್ಯ ಮರಿಚೀಕೆಯಾಗಿದೆ. ಇಲ್ಲಿನ ರಸ್ತೆಯಲ್ಲಿ ಮಳೆಗಾಲದಲ್ಲಿ ನಡೆದಾಡಲು ಸಾಧ್ಯವಿರುವುದಿಲ್ಲ. ಬೇಸಿಗೆಯಲ್ಲಿ ಮನೆಯ ಹೊರಗಡೆ ಯಾವ ವಸ್ತುಗಳನ್ನು ಒಣಗಿಸಲು ಸಾಧ್ಯವಿಲ್ಲ. ಇಲ್ಲಿನ ನಿವಾಸಿಗಳ ಸಂಕಷ್ಟ ಯಾರಿಗೂ ಹೇಳುವ ಆಗಿಲ್ಲ. ಹಾಗಾಗಿ 2023ರ ವಿಧಾನಸಭೆಯ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವ ನಿರ್ಧಾರ ಮಾಡಲಾಗಿದೆ.ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಬ್ಯಾನರ್ ಅನ್ನು ಆದರ್ಶನಗರದಲ್ಲಿ ಕಟ್ಟಿದ್ದಾರೆ.

ಕದಂಬೋತ್ಸವ ಮೈದಾನಕ್ಕೆ ಸಾಗುವ ಬೈಪಾಸ್ ರಸ್ತೆಗೆ ರಾತ್ರೋರಾತ್ರಿ ತರಾತುರಿಯಲ್ಲಿ ಡಾಂಬರೀಕರಣ ಮಾಡಲಾಗಿದೆ. ಅದು ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದೆ. ಪಟ್ಟಣದ ಪ್ರತಿಯೊಂದು ಭಾಗದಲ್ಲಿ ರಸ್ತೆ, ಚರಂಡಿ ಕಾರ್ಯಗಳು ನಡೆಯುತ್ತಿವೆ. ಆದರೆ ಆದರ್ಶನಗರ ಯಾಕೆ ಜನಪ್ರತಿನಿಧಿಗಳ ಕಣ್ಣಿಗೆ ಕಾಣಿಸುತ್ತಿಲ್ಲ ಎಂಬುದು ತಿಳಿದಿಲ್ಲ ಎಂದು ಅಲ್ಲಿನ ನಿವಾಸಿ ಅಶೋಕ ರಿತ್ತಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT