ಜಿಲ್ಲೆಯಲ್ಲಿ ಒಟ್ಟು 1,375 ಸ್ಥಳಗಳಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಅವುಗಳ ವಿಸರ್ಜನೆ ಮೆರವಣಿಗೆ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ. ಈ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ವಾತಾವರಣ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯ ಮಾರಾಟ, ಸಾಗಾಟ ನಿಷೇಧಿಸಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.