ಕಾರವಾರ: ‘ಜನರ ದಿಕ್ಕು ತಪ್ಪಿಸುವ ಸಲುವಾಗಿ ಸುಳ್ಳು ಹೇಳುವುದನ್ನೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ವೃತ್ತಿ ಮಾಡಿಕೊಂಡಿದ್ದಾರೆ’ ಎಂದು ಸಾಮಾಜಿಕ ಕಾರ್ಯಕರ್ತ ಮಾಸ್ತಪ್ಪ ನಾಯ್ಕ ಆರೋಪಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಚೆಗೆ ಹೊನ್ನಾವರದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ನೂರಾರು ಜನರ ಎದುರು ಸಚಿವ ವೈದ್ಯ ಸುಳ್ಳು ಹೇಳಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ ಕಾರವಾರದಕ್ಕೆ ಬಂದಾಗ ಶರಾವತಿ ಪಂಪ್ಡ್ ಸ್ಟೋರೇಜ್ ಯೋನೆ ಬಗ್ಗೆ ಮಾತನಾಡಿಲ್ಲ ಎಂದಿದ್ದರು. ಆದರೆ, ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಯೋಜನೆ ಜಾರಿಗೊಳಿಸುವುದಾಗಿ ಹೇಳುವಾಗ ಸಚಿವರು ಅವರ ಪಕ್ಕದಲ್ಲೇ ಕುಳಿತಿದ್ದರು’ ಎಂದರು.

‘ಪಂಪ್ಡ್ ಸ್ಟೋರೇಜ್ ಯೋಜನೆಗೆ 2016ರಲ್ಲಿಯೇ ವಿಸ್ತೃತ ಯೋಜನಾ ವರದಿ ತಯಾರಿಕೆಗೆ ಒಪ್ಪಿಗೆ ಸಿಕ್ಕಿತ್ತು. ಆಗ ವೈದ್ಯ ಶಾಸಕರಾಗಿದ್ದರು. ಅವರ ಪಕ್ಷದ ಸರ್ಕಾರವೇ ಅಧಿಕಾರದಲ್ಲಿತ್ತು. ಆಗ ಮೌನವಹಿಸಿದ್ದ ಅವರು ಈಗ ಸುಳ್ಳು ಹೇಳುತ್ತ ಜನರನ್ನು ವಂಚಿಸಲು ಮುಂದಾಗಿದ್ದಾರೆ’ ಎಂದರು.

‘ಈಚೆಗೆ ನಡೆದ ಜಿಲ್ಲಾಮಟ್ಟದ ಕೆಡಿಪಿ ಸಭೆಯಲ್ಲಿ ಸ್ವಪಕ್ಷದ ಶಾಸಕ ಸತೀಶ ಸೈಲ್ ಅವರೇ ಸಚಿವರ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲರಾಗಿದ್ದಾರೆ’ ಎಂದರು.

ಅಶೋಕ ನಾಯ್ಕ, ನಾಗರಾಜ ನಾಯ್ಕ ಬಳಸೆ, ರವಿ ಹೊನ್ನಾವರ, ಚೇತನ ನಾಯ್ಕ, ನವೀನ ಭಟ್ಕಳ, ವಿಶ್ವ ತೆಂಗಿನಗುಂಡಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.