ಅಂಕೋಲಾ: ಚಲಿಸುತ್ತಿದ್ದ ಸರ್ಕಾರಿ ಬಸ್ ಒಂದರ ಸ್ಟೇರಿಂಗ್ ರಾಡ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕದ ಗದ್ದೆಗೆ ಇಳಿದ ಘಟನೆ ತಾಲ್ಲೂಕಿನ ಹಾರವಾಡ ಮಾರ್ಗದಲ್ಲಿ ನಡೆದಿದೆ.

ಅಂಕೋಲಾದಿಂದ ಹಾರವಾಡದತ್ತ ಬಸ್ ಸಂಚರಿಸುತ್ತಿದ್ದ ವೇಳೆ ಶುಕ್ರವಾರ ಬೆಳಿಗ್ಗೆ ಏಕಾಏಕಿ ಬಸ್ನ ಸ್ಟೇರಿಂಗ್ ಸಂಪರ್ಕ ಕಡಿದುಹೋಗಿದೆ. ಪರಿಣಾಮವಾಗಿ ಬಸ್ ರಸ್ತೆಯಿಂದ ನೇರವಾಗಿ ಪಕ್ಕದ ಗದ್ದೆಗೆ ಇಳಿದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಗೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಸ್ನಲ್ಲಿ ತಾಂತ್ರಿಕ ದೋಷಗಳಿರುವ ಬಗ್ಗೆ ಮತ್ತು ಸುರಕ್ಷತೆಯ ಕೊರತೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮಾಹಿತಿ ನೀಡಲಾಗಿತ್ತು. ಆದರೆ ಸ್ಥಳಿಯರು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣವೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.