ಅಂಕೋಲಾ: ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬೇಕರಿ ಕೆಲಸಕ್ಕಾಗಿ ಬಳಸಿಕೊಂಡು ಪರಾರಿಯಾಗಿದ್ದ ಆರೋಪಿ, ತಮಿಳುನಾಡಿನ ಪಿ.ರಾಮರ್ ಎಂಬುವರನ್ನು ಅಂಕೋಲಾ ಪೊಲೀಸರು 7 ವರ್ಷಗಳ ನಂತರ ಬಂಧಿಸಿದ್ದಾರೆ.

2019ರಲ್ಲಿ ತಮಿಳುನಾಡು ರಾಜ್ಯದಿಂದ 14 ವರ್ಷ ವಯಸ್ಸಿನ ಅಪ್ರಾಪ್ತ ಮಕ್ಕಳನ್ನು ಬೇಕರಿಯಲ್ಲಿ ಕೆಲಸ ಮಾಡಲು ಕರೆದುಕೊಂಡು ಬಂದಿದ್ದ ಆರೋಪಿಯು, ಮಕ್ಕಳನ್ನು ತಾಲ್ಲೂಕಿನ ಮಾದನಗೇರಿ ಗ್ರಾಮದ ಮನೆಯಲ್ಲಿ ಕೂಡಿಟ್ಟಿದ್ದ. ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಆರೋಪಿಯ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪಿ.ರಾಮರ್ ಪೆರುಮೆರಾ ತಮಿಳುನಾಡು ರಾಜ್ಯದವನಾಗಿದ್ದು, ಪ್ರಕರಣ ದಾಖಲಾದ ದಿನದಿಂದ ತಲೆಮರೆಸಿಕೊಂಡಿದ್ದ.

ಆರೋಪಿಯ ಪತ್ತೆಗೆ ಒಂದು ತಂಡ ರಚಿಸಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ತಮಿಳುನಾಡಿನ ವೇದುಗೂಬೆಟ್ಟ ಎಂಬಲ್ಲಿ ಅಂಕೋಲಾ ಠಾಣೆಯ ಎಎಸ್ಐ ಮಹಾಬಲಶ್ವರ್ ಗಡೇರ, ಎಚ್.ಸಿ ಮೋಹನ ಹಾಗೂ ಕೇರಳದ ರಾಮನಾಥಪುರ ವಧುಗಪಟ್ಟಿಯ ಆಸೀಮಪ್ಪಟಿ ತಾಲ್ಲೂಕು ಪೊಲೀಸ್ ಠಾಣೆಯ ಸಿಬ್ಬಂದಿ ಸಹಕಾರದಿಂದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-20-750412010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.