ಕಾರವಾರ: ಅಂಕೋಲಾ ಪಟ್ಟಣದ ಕಣಕಣೇಶ್ವರ ದೇವಸ್ಥಾನದ ಸಮೀಪ ಬುಧವಾರ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಗೋವಾ ಮೂಲದವರಾದ ಜಾಕೀರ್, ನೈಜಲ್, ಸದ್ದಾಂ ಮತ್ತು ಇರ್ಫಾನ್ ಬಂಧಿತರು. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಸಲುವಾಗಿ ಐದು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

‘ಹಲ್ಲೆ ಪ್ರಕರಣದಲ್ಲಿ 6 ಮಂದಿ ಭಾಗಿಯಾಗಿರುವ ಸಾಧ್ಯತೆ ಇದ್ದು, ನಾಲ್ವರನ್ನು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುವುದು. ಬಂಧಿತರೆಲ್ಲರೂ ಗೋವಾದಲ್ಲಿ ಬೇರೆ ಬೇರೆ ಉದ್ಯೋಗ ಮಾಡಿಕೊಂಡಿದ್ದರು. ಸುಪಾರಿ ಪಡೆದು ಹಲ್ಲೆ ನಡೆಸಿರುವ ಶಂಕೆ ಇದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-20-1921267335

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.