ಅಂಕೋಲಾ: ‘ಇಂದಿನ ಒತ್ತಡದ ಜೀವನಶೈಲಿಯಲ್ಲಿ ಯುವಜನತೆ ತಮ್ಮ ಆರೋಗ್ಯದ ಕಡೆಗೆ ನಿರ್ಲಕ್ಷ್ಯ ವಹಿಸುತ್ತಿರುವುದು ಆತಂಕಕಾರಿ ವಿಷಯ. ಕೇವಲ ರೋಗ ಬಂದಾಗ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಮುಖ್ಯ. ವಿದ್ಯಾರ್ಥಿ ಜೀವನದಲ್ಲಿಯೇ ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ ಮತ್ತು ಯೋಗ ರೂಢಿಸಿಕೊಳ್ಳಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜಗದೀಶ ನಾಯ್ಕ ಹೇಳಿದರು.

ಪಟ್ಟಣದ ಕೆ.ಎಲ್.ಇ ಸಂಸ್ಥೆಯ ಶೇಷಗಿರಿ ಪಿಕಳೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಈಚೆಗೆ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಅಂಕೋಲಾ ಹಾಗೂ ನಮ್ಮ ಕ್ಲಿನಿಕ್ ಪುರಲಕ್ಕಿಬೇಣ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕ ಮಂಜುನಾಥ ಇಟಗಿ ಮಾತನಾಡಿ, ‘ಶಿಕ್ಷಣ ಮತ್ತು ಆರೋಗ್ಯ ಎಂಬುದು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಶಿಕ್ಷಕ ತರಬೇತಿ ಪಡೆಯುತ್ತಿರುವ ನೀವು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದಿದ್ದರೆ ಅನಾರೋಗ್ಯ ಪೀಡಿತರಾಗುತ್ತೀರಿ’ ಎಂದು ಹೇಳಿದರು.

ಡಾ.ಎಡ್ಲಿನ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶೈಲಜಾ ಭಂಡಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಇಂದಿರಾ ನಾಯ್ಕ, ಉಪನ್ಯಾಸಕಿ ಪ್ರವೀಣಾ ನಾಯಕ, ರೇಖಾ ಬೂದಿಹಾಳ, ಅಶ್ವಿನಿ ಗೌಡ, ಭರತ ಆಗೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-20-2037800969

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.