ಅಂಕೋಲಾದಲ್ಲಿ ಖಾಸಗಿ ಬಂದರು ವಿರೋಧಿಸಿ ಪಟ್ಟಣದ ಜೈಹಿಂದ್ ವೃತ್ತದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಪಾಲ್ಗೊಂಡಿದ್ದ ಜನಸ್ತೋಮ
ಅಂಕೋಲಾದಲ್ಲಿ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರಿಗೆ ಮನವಿ ಸಲ್ಲಿಸಿದರು
ಸಚಿವ ಸಂಸದರ ವಿರುದ್ಧ ಆಕ್ರೋಶ
‘ಮೀನುಗಾರ ಸಮಾಜದ ಕೋಟಾದಲ್ಲಿ ಸಚಿವ ಸ್ಥಾನ ಪಡೆದ ಮಂಕಾಳ ವೈದ್ಯ ಇದುವರೆಗೂ ನಮ್ಮ ಸಮಸ್ಯೆಯನ್ನು ಆಲಿಸುವ ಬದಲಾಗಿ ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಅಹವಾಲು ಆಲಿಸಲು ಬಂದಿಲ್ಲ. ನದಿ ಜೋಡಣೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಮುಖ್ಯಮಂತ್ರಿ ಬಳಿ ನಿಯೋಗ ಕೊಂಡೊಯ್ದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡಕಣಿ ಬಂದರು ಹೋರಾಟಕ್ಕೆ ಬೆಂಬಲವಾಗಿ ನಿಂತಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.