ಅಂಕೋಲಾ: ‘ರಮಾನಂದ ನಾಯಕ ಅವರು ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರಾಗಿದ್ದರು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಂಡುರಂಗ ಗೌಡ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇತ್ತೀಚಿಗೆ ನಿಧನರಾದ ಹಿರಿಯ ಕಾಂಗ್ರೆಸ್ ಧುರೀಣ ದಿ.ರಮಾನಂದ ನಾಯಕರ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

‘ಜೀವನದ ಕೊನೆಯತನಕ ಮೌಲ್ಯವನ್ನು ಪಾಲಿಸಿದವರು. ಎಂತಹ ಕಠಿಣ ಪರಿಸ್ಥಿತಿಯಲ್ಲಿಯೂ ನೈತಿಕ ಮಟ್ಟವನ್ನು ಬಿಟ್ಟು ನಡೆದವರಲ್ಲ. ಕೇವಲ ರಾಜಕೀಯ ಕ್ಷೇತ್ರ ಮಾತ್ರವಲ್ಲದೇ ಸಹಕಾರ ಕ್ಷೇತ್ರದಲ್ಲಿಯೂ ಉತ್ತಮವಾಗಿ ಕಾರ್ಯನಿರ್ವಹಿಸಿ ಹಿಚಕಡ ಸೊಸೈಟಿಯನ್ನು ಕಟ್ಟಿ ಬೆಳಸಿ ಇತರರಿಗೆ ಮಾದರಿಯಾಗಿದ್ದಾರೆ’ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ಎಂ.ಶೆಟ್ಟಿ ಮಾತನಾಡಿ, ‘ರಮಾನಂದ ನಾಯಕ ಅವರು ಪ್ರಥಮ ಜಿಲ್ಲಾ ಪರಿಷತ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಮ್ಮ ಜಿಲ್ಲೆಗೆ ಬಂದ ಅತೀ ಹೆಚ್ಚು ಅನುದಾನದಲ್ಲಿ ನಮ್ಮ ತಾಲ್ಲೂಕಿಗೆ ಕುಡಿಯುವ ನೀರು, ಗ್ರಾಮೀಣ ರಸ್ತೆ, ಸೇತುವೆ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ಮಾಡಿದ್ದಾರೆ. ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ಆಗಬೇಕೆಂಬ ನಿಟ್ಟಿನಲ್ಲಿ ಹೋರಾಟ ಸಮಿತಿಯ ಅಧ್ಯಕ್ಷರಾಗಿ ನಿರಂತರ ಹೋರಾಟ ನಡೆಸಿದರು. ಅಲ್ಲದೇ ಯಕ್ಷಗಾನ ಕಲಾವಿದರಾಗಿ ಜಾನಪದ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸಿದ್ದಾರೆ’ ಎಂದರು.

ಮಾಜಿ ಶಾಸಕ ಕೆ.ಎಚ್. ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಶ್ವರ ನಾಯಕ, ವಕೀಲ ಬಿ.ಡಿ. ನಾಯ್ಕ, ವಿನೋದ ನಾಯಕ, ರಾಜೇಶ್ ಮಿತ್ರ ನಾಯ್ಕ, ಪ್ರದೀಪ ನಾಯಕ, ಶಾಂತಿ ಆಗೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-20-990662142

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.