ಅಂಕೋಲಾ: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯ ವ್ಯಕ್ತಿಯೊಬ್ಬನನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಗೆ ಗಡೀಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಅಂಕೋಲಾದ ಕಸಬ ಕೇಣಿಯ ನಿವಾಸಿ ಶ್ಯಾಮಸುಂದರ ಗೋಪಿನಾಥ ಭಂಟ್ (41) ಎಂಬುವವನೇ ಕಲಬುರಗಿಗೆ ಗಡಿಪಾರಾದ ವ್ಯಕ್ತಿ. ಈತನ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ವಿವಿಧ ಅವಧಿಗಳಲ್ಲಿ ಒಟ್ಟು ಹತ್ತು ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಆತನ ಚಟುವಟಿಕೆಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದರು. ಆದರೂ ಕಾನೂನುಬಾಹಿರ ಚಟುವಟಿಕೆಗಳನ್ನು ಈತ ಮುಂದುವರಿಸಿದ್ದ, ಆದೇಶದ ಹಿನ್ನೆಲೆ ಅಂಕೋಲಾ ಪೊಲೀಸ್ ಠಾಣೆಯ ಸಿಬ್ಬಂದಿ ಆರೋಪಿ ಶ್ಯಾಮಸುಂದರನನ್ನು ಕಲಬುರಗಿ ಜಿಲ್ಲಾ ನಗರ ವ್ಯಾಪ್ತಿಯ ಚೌಕ ಪೊಲೀಸ್ ಠಾಣೆಯ ಅಧಿಕಾರಿಗಳು ಮುಂದೆ ಹಾಜರುಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-20-1158497952

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.