ಅಂಕೋಲಾ: ವಿದ್ಯಾರ್ಥಿಗಳು ಯಾವಾಗಲೂ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಿ ತಮ್ಮ ಜ್ಞಾನ ಪಡೆದು ಉತ್ತಮ ವಿದ್ಯಾರ್ಥಿಗಳಾಗಿ ಭವಿಷ್ಯದಲ್ಲಿ ಉನ್ನತ ಸ್ಥಾನ ಪಡೆಯಬೇಕು ಎಂದು ಸತ್ಯಾಗ್ರಹ ಸ್ಮಾರಕ ಶಿಕ್ಷಣ ಸಮಿತಿಯ ಅಧ್ಯಕ್ಷ ವಸಂತ ನಾಯಕ ಜಮಗೋಡ ಹೇಳಿದರು.

ತಾಲ್ಲೂಕಿನ ಶೆಟಗೇರಿ ಸ್ಮಾರಕ ಪ್ರೌಢಶಾಲೆಯ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ, ಸ್ವಾಗತಿಸಿ ಅವರು ಮಾತನಾಡಿದರು.

ಸಂಸ್ಥೆಯ ಗೌರವಾಧ್ಯಕ್ಷ ಶಾಂತಾರಾಮ ನಾಯಕ ಹಿಚ್ಕಡ ಮಾತ ನಾಡಿ, ನಮ್ಮ ಶಾಲೆಯು ಅತ್ಯಂತ ಐತಿಹಾಸಿಕ ಹಿನ್ನಲೆಯನ್ನು ಹೊಂದಿದ ಶಾಲೆಯಾಗಿದ್ದು, ಇಲ್ಲಿ ಕಲಿಸುತ್ತಿರುವ ಶಿಕ್ಷಕರು ಕೂಡ ಉತ್ತಮ ಮಾರ್ಗದರ್ಶನ ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅದರ ಜೊತೆಗೆ ಸರ್ಕಾರದಿಂದ ನಡೆಯುವ ಎಲ್ಲ ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ಮಾಡುತ್ತಿದ್ದಾರೆ. ನಮ್ಮ ಶಾಲೆಯಲ್ಲಿ ಉತ್ತಮವಾದ ಕಲಿಕಾ ವಾತಾವರಣವಿದ್ದು, ಅದರ ಸದುಪಯೋಗ ಪಡೆದುಕೊಂಡು ಆದರ್ಶ ವಿದ್ಯಾರ್ಥಿಗಳಾಗಿ ಎಂದರು.

ಮುಖ್ಯ ಶಿಕ್ಷಕ ಎನ್.ವಿ.ರಾಠೋಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಆಡಳಿತ ಮಂಡಳಿಯ ಸದಸ್ಯರಾದ ದೇವಿದಾಸ ನಾಯಕ ಕಣಗಿಲ, ಮನೋಹರ ನಾಯಕ, ಉದಯ ನಾಯಕ, ಶಿಕ್ಷಕ ರಾಜು ಶೇಡಗೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-20-1461888792

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.