ದಾಂಡೇಲಿ: ಕರ್ನಾಟಕದ ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ ಅವರಿಗೆ ಜೊಯಿಡಾದ ಕುಣಬಿ ಸಮಾಜದ ವತಿಯಿಂದ ಶನಿವಾರ ಮನವಿ ಸಲ್ಲಿಸಲಾಯಿತು.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ಯಲ್ಲಾಪುರ ಹಾಗೂ ಇತರ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಕುಣಬಿ ಸಮುದಾಯ ಮೂಲತಃ ಕಾಡು ವಾಸಿಗಳು ಪರಿಸರ ಸಂರಕ್ಷಣೆ ಹಾಗೂ ಕಾಡಿನ ಉತ್ಪನ್ನಗಳನ್ನೇ ನಂಬಿಕೊಂಡು ಬದುಕುತ್ತಿರುವ ಕುಣಬಿ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿದೆ ಇರುವುದು ಅತ್ಯಂತ ನೋವಿನ ಸಂಗತಿ ಎಂದು ತಿಳಿಸಲಾಗಿದೆ.

ಈ ಕಳೆದ 30 ವರ್ಷಗಳಿಂದ ಕುಣಬಿಗಳು ಸಂಘಟಿತರಾಗಿ ಹಲವಾರು ಹೋರಾಟ ಮಾಡುತ್ತಲೇ ಬಂದಿದ್ದಾರೆ. ಹೋರಾಟ ಗಮನಿಸಿದ ರಾಜ್ಯ ಸರ್ಕಾರ 2017ರಲ್ಲಿ ಕುಣಬಿಗಳ ಅಧ್ಯಯನಕ್ಕೆ ಸಮಿತಿ ರಚಿಸಿದ್ದು, 2017 ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗಿದೆ. ಸರ್ಕಾರ 8 ವರ್ಷಗಳ ಹಿಂದೆ ಕೇಂದ್ರಕ್ಕೆ ಶಿಪಾರಸು ಮಾಡಿದೆ. ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಮೀನಾಮೇಷ ಎಣಿಸುತ್ತಾ ಬಂದಿದೆ. ಕುಣಬಿ ಸಮುದಾಯದ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ರಾಜಕೀಯ ಇಚ್ಛಾಶಕ್ತಿ ಅಗತ್ಯವಿದೆ. ನ್ಯಾಯಮೂರ್ತಿಗಳು ಈ ಕುರಿತು ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕುಣಬಿಗಳು ಸುಮಾರು 30 ಸಾವಿರಕ್ಕಿಂತ ಹೆಚ್ವು ಇದ್ದಾರೆ. ಕಾಡಿನ ಮಧ್ಯೆ ವಾಸ ಮಾಡುತ್ತಾ ಕಾಡು ರಕ್ಷಣೆ ಜೊತೆಗೆ ಬದುಕಿಗಾಗಿ ಅರಣ್ಯ ಭೂಮಿಯನ್ನು ಸಾಗುವಳಿ ಬದುಕು ನಡಸುತ್ತಿದ್ದಾರೆ. ಕುಣಬಿಗಳು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾದಲ್ಲಿ ಸಾಗುವಳಿ ಮಾಡಿದ ಭೂಮಿಯ ತಮಗೆ ಸಿಗಲಿದೆ. ಪ್ರದೇಶದ ಅಭಿವೃದ್ಧಿ ಹಾಗೂ ಪ್ರಗತಿಗೆ ಮತ್ತು ಮೂಲಭೂತ ಸೌಕರ್ಯಗಳಿಗೆ ದಾರಿಯಾಗಲಿದೆ ಎಂದು ಮುಖಂಡರು ಆಶಯ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ನ್ಯಾಯಮೂರ್ತಿಗಳು ‘ನಾನು ಸರ್ಕಾರ ಹಾಗೂ ಸಂಬಂಧಿಸಿದ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗಕ್ಕೆ ಪತ್ರ ಬರೆದು ಗಮನ ಸೆಳೆಯುತ್ತೇನೆ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕುಣಬಿ ಸಮಾಜದ ಅದ್ಯಕ್ಷ ಸುಭಾಷ್ ಗಾವಡೆ, ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ರಾಜೇಶ ಗಾವಾಡೆ, ಪ್ರಕಾಶ ವೇಲಿಪ್, ಶಾಂತ್ ವೇಲಿಪ್, ಡಿವೈಎಫ್ಐ ಮುಖಂಡರಾದ ಡಿ.ಸ್ಯಾಮಸನ್ ವಕೀಲರಾದ ಕೆ.ಎಚ್.ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.