ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಟ ನಿರ್ಮಾಣ ಸಹಾಯಧನಕ್ಕೆ ಅರ್ಜಿ ಆಹ್ವಾನ

Published 21 ಜುಲೈ 2023, 6:05 IST
Last Updated 21 ಜುಲೈ 2023, 6:05 IST
ಅಕ್ಷರ ಗಾತ್ರ

ಕಾರವಾರ: ತೋಟಗಾರಿಕೆ ಇಲಾಖೆಯ ವತಿಯಿಂದ 2023-24 ನೇ ಸಾಲಿನಲ್ಲಿ ಖಾಲಿ ಜಮೀನಿನಲ್ಲಿ ತೋಟ ಮಾಡಿಕೊಳ್ಳಲು ಆಸಕ್ತಿ ಹೊಂದಿರುವ ರೈತರಿಗೆ ನರೇಗಾ ಯೋಜನೆಯಡಿ ಹೊಸ ತೋಟ ನಿರ್ಮಾಣಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿಯಲ್ಲಿ ಅಡಿಕೆ, ತೆಂಗು, ಮಾವು, ಗೇರು ಮುಂತಾದ ಬಹುವಾರ್ಷಿಕ ಬೆಳೆಗಳ ತೋಟವನ್ನು ನಿರ್ಮಿಸಿಕೊಳ್ಳಬಹುದು. ಅಪ್ರಧಾನ ಹಣ್ಣುಗಳು ಮತ್ತು ಸಾಂಬಾರು ಬೆಳೆಗಳನ್ನು ತೋಟದಲ್ಲಿ ಹಾಗೂ ಜಮೀನಿನಲ್ಲಿ ಬದುಗಳಲ್ಲಿ ನಾಟಿ ಮಾಡಿಕೊಳ್ಳಲೂ ಸಹ ಸಹಾಯಧನ ಲಭ್ಯವಿದೆ. ಆಸಕ್ತಿಯುಳ್ಳ ರೈತರು ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ 9353548931,8310478112, 8317498506,7619274889 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT