ಶಿರಸಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಕರೆ ನೀಡಿರುವ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನದ ಅಂಗವಾಗಿ ನಗರದಲ್ಲಿ ಶನಿವಾರ ರೆಡ್ ಆ‍್ಯಂಟ್ ಸಂಘಟನೆ ವತಿಯಿಂದ 75 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ ನಡೆಸಲಾಯಿತು.

ಇಲ್ಲಿನ ಸೆಂಟ್ ಆಂತೋನಿ ಶಾಲೆ ಆವರಣದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಶಾಲೆಯ ವಿದ್ಯಾರ್ಥಿಗಳು, ಸಂಘಟನೆಯ ಸದಸ್ಯರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು. ನಗರದ ಮುಖ್ಯ ರಸ್ತೆಗಳ ಮೂಲಕ ಉದ್ದನೆಯ ಧ್ವಜವನ್ನು ಮೆರವಣಿಗೆ ಮೂಲಕ ಕೊಂಡೊಯ್ಯುವುದನ್ನು ಜನರು ಕುತೂಹಲದಿಂದ ವೀಕ್ಷಿಸಿದರು.

ತಾಲ್ಲೂಕಿನೆಲ್ಲೆಡೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲಾಯಿತು. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸದಲ್ಲಿ ಅವರ ತಾಯಿ ಸರ್ವೇಶ್ವರಿ ಹೆಗಡೆ ಧ್ವಜಾರೋಹಣ ನೆರವೇರಿಸಿದ್ದರು. ನಗರ ವ್ಯಾಪ್ತಿಯಲ್ಲೂ ಅಂಗಡಿ ಮುಂಗಟ್ಟು, ಕಚೇರಿಗಳ ಮೇಲೆ ರಾಷ್ಟ್ರಧ್ವಜ ರಾರಾಜಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.