ಶಿರಸಿ: ‘ತಾಲ್ಲೂಕಿನ ಬನವಾಸಿಯಲ್ಲಿ ಕದಂಬೋತ್ಸವವನ್ನು ನಡೆಸಲು ಸರ್ಕಾರ ನಿರ್ಲಕ್ಷ್ಯ ತೋರುತ್ತಿದ್ದು, ಈ ಕೂಡಲೇ ಸಭೆ ಕರೆದು ಉತ್ಸವ ಆಯೋಜಿಸಬೇಕು’ ಎಂದು ಬನವಾಸಿ ನೂತನ ತಾಲ್ಲೂಕು ರಚನೆ ಹೋರಾಟ ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ.

ಈ ಕುರಿತು ಜಂಟಿ ಹೇಳಿಕೆ ನೀಡಿರುವ ಹೋರಾಟ ಸಮಿತಿಯ ಅಧ್ಯಕ್ಷ ಉದಯಕುಮಾರ ಕಾನಳ್ಳಿ, ಗೌರವಾಧ್ಯಕ್ಷ ಸಿ.ಎಚ್.ನಾಯ್ಕ ಮಾಳಂಜಿ ಹಾಗೂ ಕಾರ್ಯದರ್ಶಿ ವಿಶ್ವನಾಥ ವಡೆಯರ್ ಅವರು, ‘ಪ್ರತಿ ವರ್ಷವೂ ಕದಂಬೋತ್ಸವವನ್ನು ಕಡೆಗಣಿಸಲಾಗುತ್ತಿದೆ. ಕನ್ನಡದ ಕೀರ್ತಿಯನ್ನು ಪಸರಿಸುವ ಇಂತಹ ಐತಿಹಾಸಿಕ ಉತ್ಸವವನ್ನು ಕಾಲಮಿತಿಯಲ್ಲಿ ನಡೆಸಲು ಸರ್ಕಾರ ಸನ್ನದ್ಧವಾಗಬೇಕು’ ಎಂದು ಆಗ್ರಹಿಸಿದ್ದಾರೆ.

‘ ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ ಅವರು ಬನವಾಸಿಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ, ಸರ್ಕಾರದಿಂದ ಮೇಲ್ಮಟ್ಟದ ಬೆಂಬಲ ಮತ್ತು ಆಶೀರ್ವಾದದ ಅಗತ್ಯವಿದೆ’ ಎಂದು ಹೇಳಿದ್ದಾರೆ.

‘ಅಭಿವೃದ್ಧಿಯ ದೃಷ್ಟಿಯಿಂದ ಕೇವಲ ಉತ್ಸವ ನಡೆಸುವುದಷ್ಟೇ ಅಲ್ಲದೆ, ಪ್ರತಿವರ್ಷ ಕದಂಬೋತ್ಸವದ ನೆನಪಿಗಾಗಿ ಬನವಾಸಿಯಲ್ಲಿ ಕನಿಷ್ಠ ಒಂದು ಶಾಶ್ವತ ಅಭಿವೃದ್ಧಿ ಕೆಲಸವನ್ನು ಕೈಗೊಳ್ಳಬೇಕು. ಈ ಕೂಡಲೇ ರಾಜ್ಯ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು’ ಎಂದು ಒತ್ತಾಯಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-20-1791983683

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.