ಯಲ್ಲಾಪುರ: ‘ಬೇಡ್ತಿ– ಅಘನಾಶಿನಿ ನದಿತಿರುವು ಯೋಜನೆಯ ಡಿಪಿಆರ್ (ವಿಸ್ತೃತ ಯೋಜನಾ ವರದಿ)ಗೆ ಈಗಾಗಲೇ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಯೋಜನೆ ಅನುಷ್ಠಾನದ ಹಂತಕ್ಕೆ ಬರವ ಮುನ್ನ ನಮ್ಮ ಹೋರಾಟವನ್ನು ತೀವ್ರಗೊಳಿಸಬೇಕು’ ಎಂದು ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು.

ಪಟ್ಟಣದ ಟಿಎಸ್ಎಸ್ ಸಭಾಭವನದಲ್ಲಿ ಶಿರಸಿಯಲ್ಲಿ ಜನವರಿ 11 ರಂದು ನಡೆಯಲಿರುವ ಬೇಡ್ತಿ– ಅಘನಾಶಿನಿ ಬೃಹತ್ ಜನ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಶುಕ್ರವಾರ ಮಾತನಾಡಿದರು.

‘ಪಶ್ಚಿಮ ಘಟ್ಟದ ನದಿ ಜೋಡಣೆ ಯೋಜನೆಯನ್ನು ಸ್ಥಗಿತಗೊಳಿಸಲು ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿ ಆಂದೋಲನ ಯೋಜಿಸಲಾಗಿದೆ’ ಎಂದರು.

ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಮಾತನಾಡಿ, ‘ಯೋಜನೆಯ ವಿಷಯದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಬೇಕು. ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಯದಂತೆ ಎಚ್ಚರಿಕೆ ವಹಿಸಬೇಕು’ ಎಂದರು.

ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಯೋಜನೆ ಹೇಗೆ ಅವೈಜ್ಞಾನಿಕವಾದದ್ದು ಎನ್ನುವ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದರು.

ಪ್ರಮುಖರಾದ ಡಿ. ಶಂಕರ ಭಟ್ಟ, ಎಸ್.ಎಂ. ಭಟ್ಟ, ಎಂ.ಕೆ.ಭಟ್ಟ ಯಡಳ್ಳಿ, ಎಂ.ಆರ್.ಹೆಗಡೆ ಮಾತನಾಡಿದರು. ಸಮಿತಿಯ ಸಂಚಾಲಕ ನರಸಿಂಹ ಸಾತೊಡ್ಡಿ ಜನಸಂಪರ್ಕ ಅಭಿಯಾನದ ಕುರಿತು ಮಾಹಿತಿ ನೀಡಿದರು.

ಟಿಎಸ್ಎಸ್ ನಿರ್ದೇಶಕ ಕೃಷ್ಣ ಹೆಗಡೆ ಜೂಜಿನಬೈಲ, ಆನಗೋಡ ಸೊಸೈಟಿ ಅಧ್ಯಕ್ಷ ಎನ್. ಕೆ. ಭಟ್ಟ ಅಗ್ಗಾಶಿಕುಂಬ್ರಿ, ಕಳಚೆ ಸೊಸೈಟಿ ಅಧ್ಯಕ್ಷ ಉಮೇಶ ಭಾಗ್ವತ, ಮಾವಿಮನೆ ಸೊಸೈಟಿ ಅಧ್ಯಕ್ಷ ಸುಬ್ಬಣ್ಣ ಬೋಳ್ಮನೆ, ಯಲ್ಲಾಪುರ ಸೀಮಾ ಪರಿಷತ್ ಅಧ್ಯಕ್ಷ ನಾಗೇಶ ಹೆಗಡೆ ಪಣತಗೇರಿ, ನಗರ ಸೀಮಾ ಪರಿಷತ್ ಅಧ್ಯಕ್ಷ ಸುಬ್ರಹ್ಮಣ್ಯ ಹೆಗಡೆ, ಬೇಡ್ತಿ– ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಸಂಚಾಲಕ ಟಿ.ಆರ್.ಹೆಗಡೆ, ಟಿಎಸ್ಎಸ್ ಸಲಹಾ ಸಮಿತಿ ಸದಸ್ಯ ಗಣಪತಿ ಭಟ್ಟ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.