ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಒಟ್ಟು 2,27,706 ಮತದಾರರಲ್ಲಿ 1,73,071 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಶೇ 76.01 ಮತದಾನ ಆಗಿದೆ.

ಎಲ್ಲೂ ಗೊಂದಲ ಉಂಟಾಗದೇ ಶಾಂತಿಯುತವಾಗಿ ಮತದಾನ ನಡೆದಿದ್ದು, ಒಟ್ಟು 1,52,172 ಪುರುಷರಲ್ಲಿ 85,124 ಹಾಗೂ 1,02,534 ಮಹಿಳೆಯರಲ್ಲಿ 87,947 ಮತದಾರರು ಮತದಾನ ಮಾಡಿದ್ದಾರೆ. ಮಹಿಳೆಯರೇ ಹೆಚ್ಚು ಮತದಾನ ಮಾಡಿದಂತಾಗಿದೆ. ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಸಹ ಮಹಿಳೆಯರೇ ಹೆಚ್ಚು ಮತದಾನ ಮಾಡುವ ಮೂಲಕ ಗಮನ ಸೆಳೆದಿದ್ದರು.

ಒಟ್ಟು 248 ಮತಗಟ್ಟೆಗಳಲ್ಲಿ ಕಿರಿಯ ಪ್ರಾಥಮಿಕ ಶಾಲೆ ಹದ್ಲೂರರಲ್ಲಿ ಶೇ 89.73 ಅತೀ ಹೆಚ್ಚು ಮತದಾನವಾದರೆ, ಅಂಜುಮನ್ ತಕಿಯಾ ಉರ್ದು ಪ್ರಾಥಮಿಕ ಶಾಲೆ, ತಕಿಯಾ ಸ್ಟ್ರೀಟ್ (ಪಶ್ಷಿಮ ಭಾಗ) ಕೇವಲ ಶೇ60.29 ಮತದಾನವಾಗುವ ಮೂಲಕ ಅತೀ ಕಡಿಮೆ ಮತದಾನವಾದ ಕೇಂದ್ರವಾಗಿದೆ. ಸುಮಾರು 78ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಶೇ 80ಕ್ಕಿಂತಲೂ ಹೆಚ್ಚು ಮತದಾನವಾಗಿದ್ದು ಗ್ರಾಮೀಣ ಭಾಗದಲ್ಲಿಯೇ ಹೆಚ್ಚು ಮತದಾನವಾಗಿರುವುದು ವಿಶೇಷ.

ಈ ಸಲದ ಲೋಕಸಭಾ ಚುನಾವಣೆಯಲ್ಲಿ 54,635 ಮತದಾರರು ತಮ್ಮ ಹಕ್ಕು ಚಲಾಯಿಸಿಲ್ಲ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ 129 ಮತಗಟ್ಟೆಗಳಲ್ಲಿ ಶೇ 80ಕ್ಕಿಂತ ಹೆಚ್ಚು ಮತದಾನವಾಗಿದ್ದರೆ, 14 ಮತಗಟ್ಟೆಗಳಲ್ಲಿ ಶೇ 90ಕ್ಕೂ ಹೆಚ್ಚು ಮತದಾನವಾಗಿತ್ತು. ವಿಧಾನಸಭಾ ಚುನಾವಣೆಗೆ ಹೋಲಿಸಿದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿದೆ. ಆದರೂ ಕಳೆದ ಲೋಕಸಭಾ ಚುನಾವಣೆಗಿಂತ ಮತದಾನ ಪ್ರಮಾಣ ಏರಿಕೆ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.