ಕಾರವಾರ: ಭಟ್ಕಳ ತಾಲ್ಲೂಕಿನಾದ್ಯಂತ ಶುಕ್ರವಾರ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ.

‘ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೇ 28ರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಮದ್ಯ ಮಾರಾಟ, ಸಾಗಾಟ ಸ್ಥಗಿತಗೊಳಿಸಲಾಗಿದೆ. ಈ ಆದೇಶ ಮೇ 30ರ ಬೆಳಿಗ್ಗೆ 6 ಗಂಟೆವರೆಗೆ ಭಟ್ಕಳ ತಾಲ್ಲೂಕಿನ ವ್ಯಾಪ್ತಿಗೆ ಅನ್ವಯ ಆಗಲಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಭಟ್ಕಳ ನಗರದಲ್ಲಿ ಮುರಿನಕಟ್ಟೆ ತೆರವು ವಿಚಾರವಾಗಿ ಎದ್ದಿರುವ ಗೊಂದಲ ಹಾಗೂ ಶುಕ್ರವಾರ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-20-1654769502

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.